ಕರ್ನಾಟಕ

karnataka

ETV Bharat / state

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಹಿಡಿದು ಪೊಲೀಸರಿಗೊಪ್ಪಿಸಿದ ಜನ - ತುಮಕೂರು

ಬಾಲಕಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

accused arrested
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಹಿಡಿದು ಪೊಲೀಸರಿಗೊಪ್ಪಿಸಿದ ಜನ

By ETV Bharat Karnataka Team

Published : Feb 8, 2024, 3:26 PM IST

ತುಮಕೂರು :ಮದ್ಯ ಕುಡಿದ ಅಮಲಿನಲ್ಲಿ ಯುವಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಆರೋಪಿ ಕೃತ್ಯ ಎಸಗಲು ಯತ್ನಿಸಿದ್ದಾನೆ. ಬಾಲಕಿ ಕಿರುಚುವುದನ್ನು ಕಂಡು ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ದೌಡಾಯಿಸಿ, ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

ಬಾಲಕಿ 1ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ಜಿಲ್ಲೆಯ ಕೊರಟಗೆರೆ ಪಟ್ಟಣದ ಖಾಸಗಿ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಯುವಕ ಪಟ್ಟಣದಲ್ಲಿ ಅನುಮಾನದಿಂದ ಓಡಾಡುತ್ತಿದ್ದ. ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಕಾಮುಕನನ್ನು ಜನರು ಗಮನಿಸಿದಾಗ ಪರಾರಿಯಾಗಲು ಮುಂದಾಗಿದ್ದಾನೆ. ಆಗ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ಕಳಿಸಲಾಗಿದೆ. ಸ್ಥಳಕ್ಕೆ ಸಿಪಿಐ ಅನಿಲ್ ಮತ್ತು ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಜನರು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ:ಬೆಂಗಳೂರಲ್ಲಿ ಡಬಲ್​ ಮರ್ಡರ್​: ಚಾಕುವಿನಿಂದ ಇರಿದು ವ್ಯಾಪಾರಿಗಳ ಕೊಲೆ, ಆರೋಪಿ ವಶಕ್ಕೆ

ABOUT THE AUTHOR

...view details