ಬೆಂಗಳೂರು:ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕಿಡಿಗೇಡಿಗಳು ಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಇಂದು ಅಪ್ಪು ಅಭಿಮಾನಿಗಳು ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು.
ಮಾರ್ಚ್ 19ರಂದು ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಎಂದಿದ್ದ ಹೆಸರು ಬದಲಾವಣೆಗೆ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಲವರು ಆರ್‌ಸಿಬಿ ಪಂದ್ಯ ಸೋಲುವುದಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಾರ್ಯಕ್ರಮಕ್ಕೆ ಬಂದಿದ್ದೇ ಕಾರಣ ಎಂದು ನಿಂದಿಸಿ ಪೋಸ್ಟ್ ಮಾಡಿದ್ದರು.