ಕರ್ನಾಟಕ

karnataka

ETV Bharat / state

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 1 ವರ್ಷ ಶಿಕ್ಷೆ - COURT JUDGEMENT

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 1 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಹೊಸ ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದಾಗಿದೆ.

COURT JUDGEMENT
ಜಿಲ್ಲಾ ನ್ಯಾಯಾಲಯ (ETV Bharat)

By ETV Bharat Karnataka Team

Published : Feb 12, 2025, 7:23 AM IST

ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ. ದೇಶದಲ್ಲಿ ಬಿಎನ್‌ಎಸ್‌ (ಭಾರತೀಯ ನ್ಯಾಯ ಸಂಹಿತೆ) ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದು. ಕೇವಲ ಮೂರುವರೆ ತಿಂಗಳಲ್ಲಿ ತೀರ್ಪು ಪ್ರಕಟವಾಗಿದೆ.

ಮೆಕ್ಯಾನಿಕ್‌ ಆಗಿ ಕೆಲಸ ಮಾಡಿಕೊಂಡಿದ್ದ 24 ವರ್ಷದ ಯುವಕನೇ ಶಿಕ್ಷೆಗೀಡಾದ ಅಪರಾಧಿ.

2024ರ ಅ.5, 10, 15ರಂದು ಘಟನೆ ನಡೆದಿದೆ. ಅ.5ರಂದು ಕುಕ್ಕೇಡಿ ಗೋಳಿಯಂಗಡಿಯ ನಿರ್ಜನ ರಸ್ತೆಯಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದನು. ಅ.10ರಂದು ಬೆಳಗ್ಗೆ 7.45ರ ಸುಮಾರಿಗೆ ಮತ್ತೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಯು ವಿದ್ಯಾರ್ಥಿನಿಗೆ ಬೈಕ್‌ ತಾಗಿಸಿಕೊಂಡು ‘ನಿನ್ನನ್ನು ಕಾಲೇಜಿಗೆ ಬಿಡಬೇಕಾ? ನಿನ್ನ ಮೊಬೈಲ್‌ ನಂಬರ್‌ ಕೊಡು’ ಎಂದು ಕೇಳಿದ್ದಾನೆ. ಅ.15ರಂದು ಬೆಳಗ್ಗೆ 7.45ಕ್ಕೆ ಮತ್ತೆ ಬೈಕ್‌ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಸೆಕ್ಷನ್‌ 12ರಡಿ ಪೋಕ್ಸೋ ಮತ್ತು ಬಿಎನ್‌ಎಸ್‌ 78ರ ಅಡಿ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ 1 ವರ್ಷ ಸಾದಾ ಸಜೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಶಿಕ್ಷೆ ಅನುಭವಿಸಬೇಕು. ಸಂತ್ರಸ್ತ ವಿದ್ಯಾರ್ಥಿನಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ವೇಣೂರು ಪೊಲೀಸ್‌ ಠಾಣೆಯ ಪಿಎಸ್‌ಐ ಶ್ರೀಶೈಲ್‌ ಟಿ. ಮುರಗೋಡು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಕಾಲೇಜು ಅಟೆಂಡರ್​ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ - COURT JUDGMENT

ABOUT THE AUTHOR

...view details