ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಸರ್ಕಾರದಿಂದ ಪರೀಕ್ಷೆ ಉಚಿತವಾಗಿ ಮಾಡಿ; ಆರ್.ಅಶೋಕ್ ಆಗ್ರಹ - R Ashok - R ASHOK

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಾಗುತ್ತಿರುವ ಕಾರಣ ಸೋಂಕಿನ ಪರೀಕ್ಷೆಯನ್ನು ಉಚಿತವಾಗಿ ಮಾಡುವಂತೆ ವಿಪಕ್ಷ ನಾಯಕ ಆರ್​.ಅಶೋಕ್​​​ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.

ಆರ್.ಅಶೋಕ್
ಆರ್.ಅಶೋಕ್ (ETV Bharat)

By ETV Bharat Karnataka Team

Published : Jul 22, 2024, 4:39 PM IST

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಇದರ ಪರೀಕ್ಷೆಯನ್ನು ಸರ್ಕಾರದಿಂದ ಉಚಿತವಾಗಿ ಮಾಡುವಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.

ಸದನದಲ್ಲಿ ಇಂದು ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಬೆಂಗಳೂರಿನಲ್ಲಿ 300 ರಿಂದ 400 ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಡೆಂಗ್ಯೂಗೆ 10 ಮಂದಿ ಮೃತಪಟ್ಟಿದ್ದಾರೆ. ಸತ್ತವರಲ್ಲಿ ಹೆಚ್ಚು ಮಕ್ಕಳೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಇದುವರೆಗೆ ರಾಜ್ಯದಲ್ಲಿ 14,223 ಪ್ರಕರಣಗಳು ವರದಿಯಾಗಿವೆ. ಪ್ರತಿದಿನ 400ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿವೆ.

ಒಂದು ವರ್ಷದೊಳಗಿನ 238 ಮಕ್ಕಳಿಗೆ ಈ ರೋಗ ಕಂಡು ಬಂದಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ 3, ಶಿವಮೊಗ್ಗದಲ್ಲಿ 2, ಧಾರವಾಡ 1, ಹಾಸನ 2, ಮೈಸೂರಿನಲ್ಲಿ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರ್ಕಾರ 300 ರೂ. ನಿಗದಿ ಮಾಡಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ 600 ರಿಂದ 700 ರೂ ನಿಗದಿ ಮಾಡಿ, ಲಂಗು ಲಗಾಮಿಲ್ಲದೇ ರೋಗಿಗಳಿಂದ ಹೆಚ್ಚಿನ ದರ ಪಡೆಯಲಾಗುತ್ತಿದೆ ಎಂದು ದೂರಿದರು.

ಸೊಳ್ಳೆ ನಿಯಂತ್ರಣ ಮಾಡಲಾಗುತ್ತಿಲ್ಲ. ನೀರು ನಿಲ್ಲುವ ಜಾಗಕ್ಕೆ ಔಷಧ ಸಿಂಪಡಣೆ ಮಾಡುತ್ತಿಲ್ಲ. ಒಟ್ಟಾರೆ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲೇ ಶೇ.60 ರಿಂದ 70 ರಷ್ಟು ಡೆಂಗ್ಯೂ ರೋಗ ಹೆಚ್ಚಾಗಿದೆ. ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಇದರಿಂದ ಡೆಂಗ್ಯೂ, ಮಲೇರಿಯಾ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಸೊಳ್ಳೆಪರದೆ ಕೊಟ್ಟರೆ ಡೆಂಗ್ಯೂ ನಿಯಂತ್ರಣವಾಗುತ್ತದೆಯೇ? ಹಗಲಿನ ವೇಳೆ ಆ ಸೊಳ್ಳೆ ಕಚ್ಚುತ್ತದೆ ಎಂದಾಗ, ಆರೋಗ್ಯ ಸಚಿವ ದಿನೇಶ್‍ ಗುಂಡೂರಾವ್ ಮಾತನಾಡಿ, ಸೊಳ್ಳೆ ಪರದೆ ಕೊಡುವ ಬಗ್ಗೆ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವಿಚಾರವನ್ನು ನಿಲುವಳಿ ಸೂಚನೆ ಬದಲಾಗಿ ನಿಯಮ 69 ಅಡಿ ಚರ್ಚೆಗೆ ಕೊಡುವುದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಇದನ್ನೂ ಓದಿ:ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಚಿಕಿತ್ಸೆಗೆ ಸರ್ಕಾರದಿಂದಲೇ ದರ ನಿಗದಿ: ಸಚಿವ ದಿನೇಶ್ ಗುಂಡೂರಾವ್ - Legislative Session

ABOUT THE AUTHOR

...view details