ಕರ್ನಾಟಕ

karnataka

ETV Bharat / state

ಅಮಿತ್ ಶಾ ಬಂದ ಬಳಿಕ ರಾಜ್ಯದಲ್ಲಿ ಮೋದಿ ಶಕ್ತಿ ಇನ್ನಷ್ಟು ಹೆಚ್ಚಾಗಲಿದೆ: ಆರ್. ಅಶೋಕ್ - R Ashok

ಮಂಗಳವಾರ ಚನ್ನಪಟ್ಟಣದಲ್ಲಿ ನಡೆಲಿರುವ ಅಮಿತ್ ಶಾ ಅವರ ರೋಡ್ ಶೋ ಬಳಿಕ ರಾಜ್ಯದಲ್ಲಿ ನರೇಂದ್ರ ಮೋದಿ ಅವರ ಶಕ್ತಿ ಇನ್ನಷ್ಟು ಹೆಚ್ಚಾಗಲಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ.

ಪ್ರತಿಪಕ್ಷದ ನಾಯಕ ಆರ್. ಅಶೋಕ್
ಪ್ರತಿಪಕ್ಷದ ನಾಯಕ ಆರ್. ಅಶೋಕ್

By ETV Bharat Karnataka Team

Published : Apr 1, 2024, 5:12 PM IST

Updated : Apr 1, 2024, 7:02 PM IST

ಅಮಿತ್ ಶಾ ಬಂದ ಬಳಿಕ ರಾಜ್ಯದಲ್ಲಿ ಮೋದಿ ಶಕ್ತಿ ಇನ್ನಷ್ಟು ಹೆಚ್ಚಾಗಲಿದೆ

ಬೆಂಗಳೂರು :ಲೋಕಸಭೆಯ ಚುನಾವಣಾ ಪ್ರಚಾರದ ಕಾವು ಏರತೊಡಗಿದೆ. ರಾಜ್ಯದಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್​- ಬಿಜೆಪಿ ಹುರಿಯಾಳುಗಳ ಪರ ಪ್ರಚಾರಕ್ಕೆ ಉಭಯ ಪಕ್ಷಗಳ ಕೇಂದ್ರದ ನಾಯಕರು ಆಗಮಿಸುತ್ತಿದ್ದಾರೆ. ಈ ನಡುವೆ ಕೇಂದ್ರ ಸಚಿವ ಅಮಿತ್ ಶಾ ಅವರು ಬಂದ ಬಳಿಕ ರಾಜ್ಯದಲ್ಲಿ ನರೇಂದ್ರ ಮೋದಿ ಶಕ್ತಿ ಇನ್ನಷ್ಟು ಜಾಸ್ತಿ ಆಗಲಿದೆ. ನಾವು ಈ ಬಾರಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ರ್‍ಯಾಲಿ ವೇಳೆ ಮಾತನಾಡಿದ ಆರ್​. ಅಶೋಕ್​, ಮಂಗಳವಾರ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ ಮಾಡುತ್ತಾರೆ. ಬಳಿಕ ಸಂಜೆ ಕೋರ್ ಕಮಿಟಿ ಸಭೆ ಮಾಡುತ್ತಾರೆ ಎಂದು ತಿಳಿಸಿದರು. ಗುಪ್ತಚರ ವರದಿಯಲ್ಲಿ ಕಾಂಗ್ರೆಸ್ 11-14 ಸ್ಥಾನ ಗೆಲ್ಲುತ್ತದೆ ಎಂದು ಸಿಎಂಗೆ ರಿಪೋರ್ಟ್ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶೋಕ್​, ಕಳೆದ ಬಾರಿ ಸಹ 20 ಸೀಟ್ ಗೆಲ್ಲುತ್ತಾರೆ ಎಂದು ರಿಪೋರ್ಟ್ ಕೊಟ್ಟಿದ್ದರು. ಆದರೆ ಕೇವಲ ಒಂದು ಸ್ಥಾನ ಗೆದ್ದರು. ಈಗಲೂ ಅಷ್ಟೇ, ಒಂದು ಸ್ಥಾನ ಗೆಲ್ಲುತ್ತಾರೆ. ರಾಜ್ಯದಲ್ಲಿ ಮೋದಿ ಅಲೆ ಇದೆ ಎಂದರು.

ಅಪಾರ್ಟ್​ಮೆಂಟ್ ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಚಾರದ ವೇಳೆ ರಾಮ ಮಂದಿರ ಮುಖ್ಯವಲ್ಲ. ರಾಜ್ಯದಲ್ಲಿ ಇರೋದು ಕಾಂಗ್ರೆಸ್ ಸರ್ಕಾರ ಎಂಬ ಹೇಳಿಕೆ ಸಂಬಂಧ ಮಾತನಾಡಿ, ಡಿ.ಕೆ ಶಿವಕುಮಾರ್ ಬೆಂಗಳೂರು ಉಸ್ತುವಾರಿಯಾದ ಹತ್ತೇ ತಿಂಗಳಲ್ಲಿ ನೀರಿಲ್ಲ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯ ಉಸ್ತುವಾರಿ, ಆದರೆ ರಾಜ್ಯಾದ್ಯಂತ ಬರ ಇದೆ. ಜನರಿಗೆ ಎಲ್ಲವೂ ಗೊತ್ತಿದೆ ಎಂದು ಟಾಂಗ್ ನೀಡಿದರು.

ಅಮಿತ್​ ಶಾ ಭೇಟಿಯಿಂದ ದೊಡ್ಡ ಪರಿಣಾಮ ಎಂದ ಸುನೀಲ್ ಕುಮಾರ್:ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು. ಇದು ಮೊದಲ ಹಂತದಲ್ಲಿ ನಡೆಯುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮೇಲೆ ದೊಡ್ಡ ಪರಿಣಾಮ ಉಂಟಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ.ರಿಜಾಯ್ಸ್ ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿಯುತ 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನೇರವಾಗಿ 5 ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರ ಜೊತೆ ನಮ್ಮ ನಾಯಕರು ಮಾತನಾಡಲಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ರೋಡ್ ಶೋ ಇರಲಿದೆ. ಇವೆರಡು ಕಾರ್ಯಕ್ರಮದ ಹೊರತಾಗಿ ನಡುವಿನ ಸಮಯಾವಕಾಶದಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಬೀದರ್, ಬೆಳಗಾವಿ ಜಿಲ್ಲೆಗಳ ಕೋರ್ ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಅವರು ಮಾತುಕತೆ ಮಾಡಲಿದ್ದಾರೆ ಎಂದು ವಿವರಿಸಿದರು.

ಬಿಜೆಪಿ 200ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಕುರಿತು ಪ್ರಸ್ತಾಪಿಸಿದ ಸುನೀಲ್ ಕುಮಾರ್, 400ರ ಸಂಖ್ಯೆ ದಾಟುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ. ದೇಶದಲ್ಲಿ 400 ಸೀಟು ಗೆಲ್ಲುವುದು ನಮಗೆ ಗೊತ್ತಿದೆ. ನೀವು ಕರ್ನಾಟಕದಲ್ಲಿ ಖಾತೆ ತೆರೆದರೆ ಸಾಕು. 400 ಸೀಟು ಗೆಲ್ಲಲು ಕರ್ನಾಟಕದ ಎಲ್ಲ ಸೀಟುಗಳನ್ನೂ ರಾಜ್ಯದ ಜನತೆ ಗೆಲ್ಲಿಸಿಕೊಡಲಿದ್ದಾರೆ. ಬಿಜೆಪಿಯ 400ರ ಗುರಿಯ ಕುರಿತು ನೀವು ಚಿಂತಿಸಬೇಡಿ ಎಂದು ತಿಳಿಸಿದರು.

ಇದನ್ನೂ ಓದಿ :ನಾಳೆ ಚನ್ನಪಟ್ಟಣಕ್ಕೆ ಅಮಿತ್​ ಶಾ: ಏ.4ಕ್ಕೆ ನಾಮಪತ್ರ ಸಲ್ಲಿಸುವೆ: ಡಾ. ಸಿ.ಎನ್ ಮಂಜುನಾಥ್​ - Dr C N Manjunath

Last Updated : Apr 1, 2024, 7:02 PM IST

ABOUT THE AUTHOR

...view details