ಪ್ರತಿಪಕ್ಷ ನಾಯಕ ಆರ್. ಅಶೋಕ್ (ETV Bharat) ಬೆಂಗಳೂರು:ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಎಟಿಎಂ ಮೂಲಕ ಪಾಲು ಹೋಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪದ ವಿಚಾರವಾಗಿ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಇಂದು ಪರಿಷತ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡು ಬಳಿಕ ಅವರು ಮಾತನಾಡಿದರು.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ವಿಚಾರವಾಗಿ ಯಾವ ಹಂತದಲ್ಲಿ ಹೇಗೆ ಹೋರಾಟ ಮಾಡಬೇಕು ಎಂದು ಪಕ್ಷದಲ್ಲಿ ಚರ್ಚಿಸಿದ್ದೇವೆ. ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ. ಶಾಸಕರೆಲ್ಲರೂ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹೋರಾಟ ಮಾಡುವುದು, ಬಳಿಕ ರಾಜ್ಯಪಾಲರ ಭೇಟಿಯ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಮುಂದುವರೆದು ಮಾತನಾಡಿ, ಈ ಹಣವನ್ನು ತೆಲಂಗಾಣಕ್ಕೆ ಟ್ರಾನ್ಸ್‌ಫರ್ ಮಾಡಿ ಚುನಾವಣೆಗೆ ಬಳಸಿಕೊಂಡಿದ್ದಾರೆ. ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು. ಆತುರವಾಗಿ ಎಸ್ಐಟಿ ರಚಿಸಿ ತಮ್ಮ ಕೊಳಕು ಮುಚ್ಚಿ ಹಾಕಲು ಮುಂದಾಗಿದ್ದಾರೆ ಎಂದು ತಿಳಿಸಿದರು.
ಪರಿಷತ್‌ಗೆ ನಡೆಯುವ ಚುನಾವಣೆ ಕುರಿತು ಮಾತನಾಡಿ, ನಮ್ಮ ಮೂವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿದೆ. ಪಕ್ಷಕ್ಕೆ ದುಡಿಯುವವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ಹೇಳಿದರು.
ಎಕ್ಸಿಟ್ ಪೋಲ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಈ ಸಮೀಕ್ಷಾ ವರದಿಗಳ ಬಳಿಕ ಆಡಳಿತ ಪಕ್ಷದವರಿಗೆ ಎದೆಬಡಿತ ಜಾಸ್ತಿಯಾಗಿದೆ ಎಂದರು.
ಇದನ್ನೂ ಓದಿ:"ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು!": ಆರ್. ಅಶೋಕ್ - R ASHOK