ರಾಮನಗರ:ಬೆಂಗಳೂರಿನ ಚೆಲ್ಲಘಟ್ಟ ಸಮೀಪ ಹೆಜ್ಜಾಲ ರೈಲ್ವೆ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳನ್ನು ಮಂಗಳವಾರ ರಾತ್ರಿ 10 ಗಂಟೆಯಿಂದ ಇಂದು ಬೆಳಗ್ಗೆ 9 ಗಂಟೆಯವರೆಗೆ ಸ್ಥಗಿತಗೊಳಿಸಿ ಕಾಮಗಾರಿ ಮಾಡಲಾಗುತ್ತಿದೆ.
ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿರುವ ಕಾರಣಕ್ಕೆ 10ರಿಂದ 12 ಸಾವಿರ ಪ್ರಯಾಣಿಕರಿಗೆ ತೊಂದರೆಯಾಗಿದೆ. ಬೆಂಗಳೂರಿಗೆ ಹೋಗಬೇಕಿರುವ ರೈಲುಗಳನ್ನು ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರ, ಬಿಡದಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಾಗಿದೆ.