ಕರ್ನಾಟಕ

karnataka

By ETV Bharat Karnataka Team

Published : 4 hours ago

ETV Bharat / state

ರಾಜ್ಯದಲ್ಲಿ ಮುಂಗಾರು ಅಂತ್ಯಕ್ಕೆ ಒಂದೆರಡು ದಿನ ಬಾಕಿ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ - Karnataka Rain Forecast

ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ ಮಾಡಿದೆ.

rain alert
ಮಳೆ (ETV Bharat)

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮುಗಿಯಲು ಒಂದೆರಡು ದಿನ ಮಾತ್ರ ಬಾಕಿ ಇರುವ ನಡುವೆ ಹವಾಮಾನ ಇಲಾಖೆಯಿಂದ ಮುಂದಿನ 24 ಗಂಟೆಗಳಿಗೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಬೀಳುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಹಲವೆಡೆ ಮಳೆಯಾಗುವ ಮುನ್ಸೂಚನೆ :ಮುಂದಿನ 24 ಗಂಟೆಗಳ ಕಾಲ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಹಗುರ ಮಳೆಯಾಗುವ ಸಂಭವ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ಆಕಾಶ:ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:ಬಸ್ಸಿನಲ್ಲಿ ಹಣ, ಒಡವೆ ಬ್ಯಾಗ್ ಬಿಟ್ಟಿದ್ದ ಪ್ರಯಾಣಿಕರು: ಮರಳಿಸಿ ಪ್ರಾಮಾಣಿಕತೆ ಮೆರೆದ NWKRTC ಸಿಬ್ಬಂದಿ - NWKRTC Honesty

ABOUT THE AUTHOR

...view details