ಕರ್ನಾಟಕ

karnataka

ETV Bharat / state

ಗಣರಾಜ್ಯೋತ್ಸವ ಸಂಭ್ರಮ ; ರಾಜಭವನ ಸಾರ್ವಜನಿಕ ವೀಕ್ಷಣೆಗೆ ಅವಕಾಶ - RAJ BHAVAN OPEN FOR PUBLIC

ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26 ಹಾಗೂ 27 ರಂದು ರಾಜಭವನಕ್ಕೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ.

raj-bhavan-to-be-open-for-public-on-january-26-and-27
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (ETV Bharat)

By ETV Bharat Karnataka Team

Published : Jan 26, 2025, 10:33 PM IST

ಬೆಂಗಳೂರು : 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26 ಮತ್ತು 27 ರಂದು ರಾಜಭವನಕ್ಕೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಛಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಸಿದ್ದರಾಮಯ್ಯ ಇದ್ದಾರೆ (ETV Bharat)

ಸಂಜೆ 6 ರಿಂದ 7.30 ಪ್ರವೇಶದ ಸಮಯವಿರಲಿದೆ. ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ.

ಸಾರ್ವಜನಿಕರು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕಾಗಿ ಕೋರಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ ಭವನದಲ್ಲಿ ಚಹಾಕೂಟ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವ ಪ್ರಯುಕ್ತ ರಾಜಭವನದಲ್ಲಿ ಆಯೋಜಿಸಿದ್ದ ಚಹಾಕೂಟದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಜೊತೆ ಭಾಗಿಯಾದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ :ದೇಶದೊಳಗಿನ ಸಂವಿಧಾನ ವಿರೋಧಿಗಳ ವಿರುದ್ಧ ಮತ್ತೊಂದು ಹೋರಾಟ ನಡೆಸಬೇಕಾಗಿದೆ: ಸಿಎಂ ಸಿದ್ದರಾಮಯ್ಯ - CM SIDDARAMAIAH MESSAGE

ABOUT THE AUTHOR

...view details