ಬೆಂಗಳೂರು:ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡ ಮತ ಹಾಕಿದ್ದಾರೆ ಎನ್ನಲಾಗಿದೆ. ಬಿಜೆಪಿ ಮೂಲಗಳೇ ಈ ಬಗ್ಗೆ ಮಾಹಿತಿ ನೀಡಿವೆ. ಎಸ್.ಟಿ.ಸೋಮಶೇಖರ್ ಮತ ಚಲಾವಣೆ ಬಳಿಕ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇನೆ. ಏಜೆಂಟ್ಗೆ ತೋರಿಸಿ ಮತ ಹಾಕಿದ್ದೇನೆ ಎಂದು ತಿಳಿಸಿದ್ದರು.
ಆದರೆ, ಇದೀಗ ಎಸ್.ಟಿ.ಸೋಮಶೇಖರ್ ಅಡ್ಡ ಮತ ಹಾಕಿದ್ದಾರೆ ಎಂದು ಬಿಜೆಪಿ ಮೂಲಗಳೇ ಮಾಹಿತಿ ನೀಡುತ್ತಿವೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಇತ್ತ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಚೇರಿಯಲ್ಲಿ ಈ ಸಂಬಂಧ ಚರ್ಚೆ ನಡೆಸಲಾಗುತ್ತಿದೆ. ವಿಪಕ್ಷ ನಾಯಕ ಆರ್.ಅಶೋಕ್, ಸುನೀಲ್ ಕುಮಾರ್, ಮಾಜಿ ಸಿಎಂ ಕುಮಾರಸ್ವಾಮಿ ಸಮಾಲೋಚನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆತ್ಮ ಸಾಕ್ಷಿಯಿಂದ ಮತದಾನ ಮಾಡಿದ್ದೇನೆ: ಆತ್ಮ ಸಾಕ್ಷಿಯಿಂದ ಮತ ಹಾಕಿದ್ದೇನೆ. ಯಾರಿಗೆ ತೋರಿಸಬೇಕು ಅವರಿಗೆ ತೋರಿಸಿ ಮತ ಚಲಾಯಿಸಿದ್ದೇನೆ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದರು. ಮತ ಚಲಾವಣೆ ಬಳಿಕ ಮಾತನಾಡಿದ ಅವರು, ಯಾರಿಗೆ ಹೇಳಬೇಕು ಅವರಿಗೆ ಹೇಳಿ ನನ್ನ ಹಕ್ಕು ಚಲಾಯಿಸಿದ್ದೇನೆ ಎಂದು ತಿಳಿಸಿದರು.