ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಂಟು ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಡಾ.ಕೆ.ಪದ್ಮರಾಜನ್ ಹಾಗೂ ಮಲ್ಲಿಕಾರ್ಜುನ ಕೆಂಗನೂರು ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ. ಬಿಜೆಪಿ ಅಭ್ಯರ್ಥಿ ನಾರಾಯಣ ಸಾ. ಕೆ ಭಾಂಡಗೆ, ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕೇನ್, ಜಿ.ಸಿ.ಚಂದ್ರಶೇಖರ್ ಮತ್ತು ಡಾ.ಸೈಯದ್ ನಾಸೀರ್ ಹುಸೇನ್ ಹಾಗೂ ಜೆಡಿಎಸ್ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರ ನಾಮಪತ್ರಗಳು ಮಾನ್ಯಗೊಂಡಿವೆ.
ರಾಜ್ಯಸಭಾ ಚುನಾವಣೆ: ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ - ನಾಮಪತ್ರ ತಿರಸ್ಕೃತ
ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 8 ಅಭ್ಯರ್ಥಿಗಳ ಪೈಕಿ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ.
ರಾಜ್ಯಸಭಾ ಚುನಾವಣೆ
Published : Feb 16, 2024, 4:17 PM IST
ಫೆಬ್ರುವರಿ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಫೆಬ್ರುವರಿ 27ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 106ರಲ್ಲಿ ಮತದಾನ ನಡೆಯಲಿದೆ. ಸಂಜೆ 5ಕ್ಕೆ ಮತಎಣಿಕೆ ಕಾರ್ಯ ಕೊಠಡಿ ಸಂಖ್ಯೆ: 106ರಲ್ಲಿ ನಡೆಯಲಿದೆ.
ಇದನ್ನೂ ಓದಿ:ರಾಜ್ಯಸಭಾ ಚುನಾವಣೆ: ಮತದಾನದ ಲೆಕ್ಕಾಚಾರ ಹೇಗೆ? ಇಲ್ಲಿದೆ ಮಾಹಿತಿ