ರಾಮನಗರ: ಅರ್ಕಾವತಿ ಜಲಾಶಯದ ಸುತ್ತಮುತ್ತಲ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಗರಿಷ್ಟ ಮಿತಿ ತಲುಪುವ ಸೂಚನೆ ದೊರೆತಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲೂ ನೀರು ಹೊರಬಿಡುವ ಸಾಧ್ಯತೆ ಇದೆ.
ಮುಂಗಾರುಪೂರ್ವದಲ್ಲೇ ತುಂಬಿದ ಡ್ಯಾಂ: ಪೂರ್ವ ಮುಂಗಾರಿನ ಸಂದರ್ಭದಲ್ಲೇ ರಾಮನಗರ ಜಿಲ್ಲೆಯ ಜೀವನಾಡಿ ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಂಚನಬೆಲೆ ಜಲಾಶಯ ತುಂಬಲು ಇನ್ನೊಂದು ಅಡಿಯಷ್ಟೇ ಬಾಕಿ ಇದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯ ಒಳ ಹರಿವಿನ ಪ್ರಮಾಣ ಏರಿಕೆಯಾಗಿದೆ.