ಬೆಳಗಾವಿ:ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್ಸಿಯು) ಬಿಕಾಂ ಪದವಿ 5ನೇ ಸೆಮಿಸ್ಟರ್ನ ಫೈನಾನ್ಶಿಯಲ್ ಮ್ಯಾನೇಜ್ಮೆಂಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬರುತ್ತಿದ್ದಂತೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ರಾಣಿ ಚನ್ನಮ್ಮ ವಿವಿ ಬಿಕಾಂ 5ನೇ ಸೆಮಿಸ್ಟರ್ನ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ರದ್ದು - Question Paper Leaked - QUESTION PAPER LEAKED
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಕಾಂ 5ನೇ ಸೆಮಿಸ್ಟರ್ನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
Published : Mar 22, 2024, 4:12 PM IST
ಮೊದಲೇ ನಿಗದಿಯಾದಂತೆ ಇಂದು ಶುಕ್ರವಾರ ಬೆಳಗ್ಗೆ 9.30ಕ್ಕೆ ವಿಶ್ವವಿದ್ಯಾಲಯದಡಿ ಸಂಯೋಜಿತವಾದ ಎಲ್ಲ ಪದವಿ ಕಾಲೇಜುಗಳಲ್ಲಿ ಪರೀಕ್ಷೆ ಆರಂಭಗೊಂಡಿತ್ತು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದ ಐದೇ ನಿಮಿಷದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಸದಾ ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಈಗ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮತ್ತೆ ಸುದ್ದಿಯಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆರ್ಸಿಯು ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ ಕದಮ್ ಅವರು ಪರೀಕ್ಷೆ ರದ್ದುಗೊಳಿಸಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು, ಇನ್ನುಳಿದ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಕುಲಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ಪ್ರಮುಖ ಮೂವರು ಆರೋಪಿಗಳು ಅರೆಸ್ಟ್