ರಾಯಚೂರು:8 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಬುಧವಾರ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.
ಮಾನ್ವಿಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆೆ. ಆರೋಪಿ ಶಿವನಗೌಡ ಮತ್ತು ಖಾಸಗಿ ಶಾಲೆಯ ಆಡಳಿತ ಮಂಡಳಿಯವರನ್ನು ಬಂಧಿಸಲಾಗಿದೆ. ಆರೋಪಿ ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.
ಎರಡನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಪ್ರತಿದಿನ ಶಾಲೆಯ ವಾಹನದಲ್ಲಿ ತೆರಳುತ್ತಿದ್ದಳು. ಹಾಗೆಯೇ ಬುಧವಾರ ಕೂಡ ಶಾಲೆಯ ವಾಹನದಲ್ಲೇ ತೆರಳಿದ್ದಳು. ಮಧ್ಯಾಹ್ನದ ವೇಳೆ ಅದೇ ಗ್ರಾಮದ ವ್ಯಕ್ತಿಯೋರ್ವ ಶಾಲೆಗೆ ತೆರಳಿ ನಿಮ್ಮ ತಾಯಿ ಕರೆಯುತ್ತಿದ್ದಾಳೆಂದು ಸುಳ್ಳು ಹೇಳಿ ಬಾಲಕಿಯನ್ನು ಶಾಲೆಯ ಬಳಿಯ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಗ್ರಾಮಕ್ಕೆ ಕರೆದುಕೊಂಡು ಬಿಟ್ಟು ಹೋಗಿದ್ದಾನೆ. ಈ ಕುರಿತು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಗೆ ಹಾಕಿದ್ದಾನೆ. ಪ್ರಕರಣದಲ್ಲಿ ಶಾಲೆಯ ಮುಖ್ಯಸ್ಥರು ಸಹ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.