ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣದ ಜವಾಬ್ದಾರಿ ಹೊತ್ತಿರುವ ಸಮಾಜಕಲ್ಯಾಣ ಇಲಾಖೆ ತನ್ನ ಕರ್ತವ್ಯ ನಿರ್ವಹಣೆ ಮತ್ತು ಹೊಣೆಗಾರಿಕೆಯಲ್ಲಿ ವಿಫಲವಾಗಿದೆ. ಇಲಾಖೆಯ ಕೆಲ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಹೇಳಿದೆ.
ಲೋಪ ಎಸಗಿ ಕರ್ತವ್ಯ ನಿರ್ವಹಣೆಯಲ್ಲಿ ಎಡವಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆಡಳಿತ ಪಕ್ಷದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿರುವ ಸಮಿತಿಯ ವರದಿಯನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದು, ಸಮಾಜಕಲ್ಯಾಣ ಇಲಾಖೆಯಲ್ಲಿ ಆಗುತ್ತಿರುವ ಲೋಪಗಳು ಬೆಳಕಿಗೆ ಬಂದಿವೆ.
ಬಜೆಟ್‌ನಲ್ಲಿ ಘೋಷಿಸಿದಂತೆ ಹಣ ಬಿಡುಗಡೆಯಾಗಿದ್ದರೂ ಕೂಡ ಸಕಾಲದಲ್ಲಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ಎಡವಿದೆ. ಇದು ಎಲ್ಲ ನಿಗಮಗಳಲ್ಲಿ ಕಂಡು ಬಂದಿರುವ ವೈಫಲ್ಯತೆಯಾಗಿದೆ ಎಂದು ವರದಿ ಹೇಳಿದೆ.