ಕರ್ನಾಟಕ

karnataka

ETV Bharat / state

ಗಂಗಾವತಿ ರೈಲು ನಿಲ್ದಾಣಕ್ಕೆ 'ಅಂಜನಾದ್ರಿ' ಹೆಸರಿಡಲು ಶಿಫಾರಸು: ಸಚಿವ ಎಂ.ಬಿ.ಪಾಟೀಲ್ - GANGAVATHI RAILWAY STATION

ಕೊಪ್ಪಳ ಜಿಲ್ಲೆಯ ಮೂರು ರೈಲ್ವೆ ನಿಲ್ದಾಣಗಳಿಗೆ ಮರುನಾಮಕರಣ ಮಾಡಬೇಕೆಂಬ ಶಿಫಾರಸನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸಚಿವ ಎಂ.ಬಿ.ಪಾಟೀಲ್
ಸಚಿವ ಎಂ.ಬಿ.ಪಾಟೀಲ್ (ETV Bharat)

By ETV Bharat Karnataka Team

Published : Nov 24, 2024, 9:22 PM IST

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು‌ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ ಎಂದಿದ್ದಾರೆ.

ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜಾನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ 'ಶೌರ್ಯ' ಇನ್ನಿಲ್ಲ

ABOUT THE AUTHOR

...view details