ಕರ್ನಾಟಕ

karnataka

ETV Bharat / state

ಆರೋಗ್ಯ ಕವಚ ಸಿಬ್ಬಂದಿಗೆ ವೇತನ ಬಿಡುಗಡೆ ಕುರಿತು ವರದಿ ಸಲ್ಲಿಸಲು ಕಾಲಾವಕಾಶ ಕೇಳಿದ ಸರ್ಕಾರ - arogya kavacha staff salary

ಆ್ಯಂಬುಲೆನ್ಸ್​​​ ವಾಹನಗಳ ಸಿಬ್ಬಂದಿಗಳಿಗೆ ವೇತನ ಬಿಡುಗಡೆಗೆ ಮಾಡಿರುವ ಕುರಿತಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಸಮಯವಕಾಶ ಕೇಳಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

By ETV Bharat Karnataka Team

Published : Aug 23, 2024, 12:27 PM IST

ಬೆಂಗಳೂರು:ಆರೋಗ್ಯ ಕವಚ-108 ಆ್ಯಂಬುಲೆನ್ಸ್​​​ ವಾಹನಗಳ ಸಿಬ್ಬಂದಿಗಳಿಗೆ ವೇತನ ಬಿಡುಗಡೆಗೆ ಮಾಡಿರುವ ಕುರಿತಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಕಾಲಾವಕಾಶ ಕೋರಿದೆ.

ಈ ಸಂಬಂಧ ಆರೋಗ್ಯ ಕವಚ-108 ನೌಕರರ ಪರವಾಗಿ ಅಖಿಲ ಕರ್ನಾಟಕ 108 ಆ್ಯಂಬುಲೆನ್ಸ್​ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಆ್ಯಂಬುಲೆನ್ಸ್ ನೌಕರರ ಸಂಘ, ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ಆ್ಯಂಬುಲೆನ್ಸ್ ನೌಕರರ ಸಂಘ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠವನ್ನು ಸರ್ಕಾರದ ಪರ ವಕೀಲರು, "ಆರೋಗ್ಯ ಕವಚ-108 ಆ್ಯಂಬುಲೆನ್ಸ್​ ವಾಹನಗಳ ಸಿಬ್ಬಂದಿಗಳಿಗೆ ವೇತನ ಬಿಡುಗಡೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಕಾಲಾವಕಾಶಬೇಕು" ಎಂದು ಕೋರಿದರು.

ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ವೇತನ ಬಿಡುಗಡೆ ವಿಚಾರ ಈಗಾಗಲೇ ವಿಳಂಬವಾಗಿದೆ. ಮತ್ತೆ ಕಾಲಾವಕಾಶ ಕೇಳಿದರೆ ಹೇಗೆ ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ವಕೀಲರು, 'ಸಂಬಂಧಪಟ್ಟ ಅಧಿಕಾರಿಗಳು ಲಭ್ಯವಾಗಿಲ್ಲದ ಕಾರಣ ವರದಿ ಸಲ್ಲಿಸಲು ಸಾಧ್ಯವಾಗಿಲ್ಲ' ಎಂದು ಮಾಹಿತಿ ನೀಡಿದರು.

ಅರ್ಜಿದಾರರ ಪರ ವಕೀಲರು, 108 ಆರೋಗ್ಯ ಕವಚ ಸಿಬ್ಬಂದಿಗೆ ಸರಿಯಾಗಿ ವೇತನ ನೀಡಲಾಗುತ್ತಿಲ್ಲ. ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ಈಗ ಸರ್ಕಾರ ಮತ್ತೆ ಕಾಲಾವಕಾಶ ಕೇಳಿತ್ತಿದೆ ಎಂದರು. ಅದಕ್ಕೆ ಸರ್ಕಾರ ಕಾಲಾವಕಾಶ ಕೇಳುತ್ತಿದೆ. ಸಮಯ ಕೊಡಬೇಕಾಗುತ್ತದೆ ಎಂದು ಹೇಳಿತು. ಅಲ್ಲದೆ, 108 ಆರೋಗ್ಯ ಕವಚ ಸಿಬ್ಬಂದಿಯ ವೇತನದಲ್ಲಿ ಕಡಿತ ಮಾಡಲು ಆರೋಗ್ಯ ಇಲಾಖೆ ಆಯುಕ್ತರು 2024ರ ಏಪ್ರಿಲ್​ 2 ರಂದು ಹೊರಡಿಸಿದ್ದ ಆದೇಶಕ್ಕೆ ಮೇ 9ರಂದು ನೀಡಿದ್ದ ಮಧ್ಯಂತರ ತಡೆಯನ್ನು ವಿಸ್ತರಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.3ಕ್ಕೆ ಮುಂದೂಡಿತು.

ಇದನ್ನೂ ಓದಿ:ಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ - MLA Harish Poonja Case

ABOUT THE AUTHOR

...view details