ಚಿತ್ರದುರ್ಗ: ರೇಣುಕಾಸ್ವಾಮಿ ಮೇಲಿನ ಹಲ್ಲೆ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 18 ಆರೋಪಿಗಳು ಅರೆಸ್ಟ್ ಆಗಿದ್ದು, ತನಿಖೆ ಚುರುಕುಗೊಂಡಿದೆ. ಈ ಮಧ್ಯೆ, ಪುತ್ರ ಪೊಲೀಸರಿಗೆ ಶರಣಾಗಿದ್ದಾನೆ ಎಂಬ ಸುದ್ದಿ ಕೇಳಿದ ಆರೋಪಿಯೊಬ್ಬರ ತಂದೆ ಸಾವನ್ನಪ್ಪಿದ್ದಾರೆ.
ಅನುಕುಮಾರ್ ಎಂಬಾತ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪವಿದೆ. ಪುತ್ರ ಪೊಲೀಸರಿಗೆ ಶರಣಾಗಿದ್ದಾನೆ ಎಂಬ ವಿಷಯ ತಿಳಿದ ಅನುಕುಮಾರ್ ತಂದೆ ಚಂದ್ರಪ್ಪ (60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಸಿಹಿ ನೀರಿನ ಹೊಂಡದ ಬಳಿ ಕುಸಿದು ಬಿದ್ದ ಚಂದ್ರಪ್ಪ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದ್ರೆ ಕಡಿಮೆ ರಕ್ತದೊತ್ತಡದಿಂದ ಅವರು ಕೊನೆಯುಸಿರೆಳೆದಿದ್ದಾರೆ.