ಬೆಂಗಳೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿ ಈವರೆಗೆ 18 ಮಂದಿ ಬಂಧನವಾಗಿದ್ದಾರೆ. ತನಿಖೆ ಮುಂದುವರಿದಿದ್ದು, ಕೊಲೆ ಪ್ರಕರಣ ಮೊದಲ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು - Pavitra Gowda unwell - PAVITRA GOWDA UNWELL
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
Published : Jun 18, 2024, 5:58 PM IST
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಗಾಗಿದ್ದ ಪವಿತ್ರಾರ ಆರೋಗ್ಯ ಹದಗೆಟ್ಟ ಹಿನ್ನೆಲೆ, ವೈದ್ಯರನ್ನು ಠಾಣೆಗೆ ಕರೆಸಿಕೊಂಡು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಚೇತರಿಕೆ ಕಾಣದ ಕಾಣದ ಹಾಗೂ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಲ್ಲತ್ತಹಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೊಲೀಸರು ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಪ್ರತಿದಿನ ಸಂಜೆ ಪವಿತ್ರಾರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದು, ಬೆಳಗ್ಗೆ ಪೊಲೀಸರು ವಿಚಾರಣೆಗೆ ಕರೆತರುತ್ತಾರೆ. ಜೂ.20ರಂದು ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಎಲ್ಲಾ ಆರೋಪಿಗಳನ್ನು ಬಹುತೇಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಸಾಧ್ಯತೆಯಿದೆ.