ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳುವಾಗ A2 ಆರೋಪಿಯಾಗಿದ್ದ ದರ್ಶನ್ ಅವರನ್ನು ಚಾರ್ಜ್ಶೀಟ್ನಲ್ಲಿ A1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್ಶೀಟ್ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
17 ಆರೋಪಿಗಳ ವಿರುದ್ಧ ಸಲ್ಲಿಕೆಯಾಗಿರುವ ಚಾರ್ಜ್ಶೀಟ್ನಲ್ಲಿ 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ದರ್ಶನ್ ಪಾತ್ರವೇನು?:ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಣ ಮಾಡಿಸಿರುವುದು, ಹಲ್ಲೆ ಮಾಡಿರುವುದು, ಹತ್ಯೆಯ ನಂತರ ಪ್ರಕರಣವನ್ನು ಮುಚ್ಚಿಹಾಕಲು ಹಣ ನೀಡಿರುವುದು ದರ್ಶನ್ ಎಂಬುದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.