ಕರ್ನಾಟಕ

karnataka

ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ ಮತ್ತೆ ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಜೈಲುಪಾಲು - Renukaswamy Murder Case

By ETV Bharat Karnataka Team

Published : Jun 20, 2024, 6:58 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

Renukaswamy Murder Case
ನಟ ದರ್ಶನ್ (ETV Bharat)

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್ ಸೇರಿದಂತೆ ನಾಲ್ಕು ಮಂದಿ ಆರೋಪಿಗಳನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದರೆ, ಇನ್ನುಳಿದವರಿಗೆ ನ್ಯಾಯಾಂಗ ಬಂಧನ ವಿಧಿಸಿ ನಗರದ 24ನೇ ಎಸಿಎಂಎಂ ನ್ಯಾಯಾಲಯ ಇಂದು ಆದೇಶಿಸಿದೆ.

ದರ್ಶನ್, ಧನರಾಜ್, ಪ್ರದೋಷ್ ಮತ್ತು ವಿನಯ್ ಎಂಬ ಆರೋಪಿಗಳನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡರೆ, ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, ಪವನ್, ನಂದೀಶ್, ರವಿ, ಅನುಕುಮಾರ್, ಜಗದೀಶ್, ನಾಗರಾಜ್, ಲಕ್ಷ್ಮಣ್ ಎಂಬವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ತಿಕ್, ನಿಖಿಲ್ ಹಾಗೂ ಕೇಶವಮೂರ್ತಿ ಹಾಗೂ ದೀಪಕ್ ಈಗಾಗಲೇ ಜೈಲಿನಲ್ಲಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್, ಪವಿತ್ರಾ ಗೌಡ ಮತ್ತಿತರ ಆರೋಪಿಗಳನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕೊಲೆ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯ: ಮತ್ತೊಮ್ಮೆ ಜೈಲು ಸೇರ್ತಾರಾ ದರ್ಶನ್? - Darshan Police custody Ends

ABOUT THE AUTHOR

...view details