ಕರ್ನಾಟಕ

karnataka

ETV Bharat / state

ರೇಣುಕಾಸ್ವಾಮಿ ಕೊಲೆ; ಪವಿತ್ರಾಗೌಡ ಜಾಮೀನು ಅರ್ಜಿ ನವೆಂಬರ್ 21ಕ್ಕೆ ವಿಚಾರಣೆ - RENUKASWAMY MURDER

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನವೆಂಬರ್ 21ಕ್ಕೆ ವಿಚಾರಣೆಗೆ ಬರಲಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

By ETV Bharat Karnataka Team

Published : Nov 7, 2024, 10:19 PM IST

ಬೆಂಗಳೂರು :ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗಳಾದ ನಟಿ ಪವಿತ್ರಾಗೌಡ, ನಾಗರಾಜು, ಲಕ್ಷ್ಮಣ್‌ ಮತ್ತು ಅನುಕುಮಾರ್‌ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ನವೆಂಬರ್ 21ಕ್ಕೆ ನಿಗದಿ ಪಡಿಸಿದೆ.

ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21ಕ್ಕೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಪವಿತ್ರಾಗೌಡ ಹಾಗೂ ಇತರೆ ಮೂವರು ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ.21ಕ್ಕೆ ನ್ಯಾಯಪೀಠ ಮುಂದೂಡಿದೆ.

ಈ ನಾಲ್ವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಕ್ರಮವಾಗಿ ಅ.14 ಮತ್ತು 16ರಂದು ಆದೇಶಿಸಿತ್ತು. ಇದರಿಂದ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ವೈದ್ಯಕೀಯ ವರದಿ ಹೈಕೋರ್ಟ್‌ಗೆ ಸಲ್ಲಿಕೆ

ABOUT THE AUTHOR

...view details