ಕರ್ನಾಟಕ

karnataka

ETV Bharat / state

ರೇಣುಕಾಸ್ವಾಮಿ ಹತ್ಯೆ ಕೇಸ್: ತನಿಖಾ ತಂಡಕ್ಕೆ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಮರು ಸೇರ್ಪಡೆ - Renukaswamy Murder Case Probe - RENUKASWAMY MURDER CASE PROBE

ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಭೀಕರ ​ಹತ್ಯೆ ಪ್ರಕರಣದ ತನಿಖಾ ತಂಡಕ್ಕೆ ಪೊಲೀಸ್ ಇನ್ಸ್​ಪೆಕ್ಟರ್​ ಗಿರೀಶ್​ ನಾಯ್ಕ್​ ಸೇರ್ಪಡೆಗೊಂಡಿದ್ದಾರೆ.

ರೇಣುಕಾಸ್ವಾಮಿ
ರೇಣುಕಾಸ್ವಾಮಿ (ETV Bharat)

By ETV Bharat Karnataka Team

Published : Jun 16, 2024, 11:18 AM IST

ಬೆಂಗಳೂರು: ದರ್ಶನ್ ಆ್ಯಂಡ್‌ ಗ್ಯಾಂಗ್‌ನಿಂದ ನಡೆದ ಯುವಕನ ಭೀಕರ ಹತ್ಯೆ ಪ್ರಕರಣದ ತನಿಖಾ ತಂಡಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಮರು ಸೇರ್ಪಡೆಯಾಗಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಇವರು ವರ್ಗಾವಣೆಯಾಗಿದ್ದರು. ನಂತರ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಮೈಸೂರಿನಲ್ಲಿ ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳ ಬಂಧನದ ಸಂದರ್ಭದಲ್ಲಿ ತನಿಖಾ ತಂಡದಲ್ಲಿದ್ದ ಗಿರೀಶ್ ನಾಯ್ಕ್ ಅವರನ್ನು ಪುನಃ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿತ್ತು.

ಪ್ರಕರಣದ ತನಿಖಾಧಿಕಾರಿಯಾಗಿ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಅವರನ್ನು ನಿಯೋಜಿಸಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಗಿರೀಶ್ ನಾಯ್ಕ್ ಅವರನ್ನು ಪ್ರಕರಣದಲ್ಲಿ ಸಹಾಯಕ‌ ತನಿಖಾಧಿಕಾರಿಯಾಗಿ ಮತ್ತೊಮ್ಮೆ ತಂಡಕ್ಕೆ ಮರು ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ‌ ಸ್ಥಳ ಮಹಜರು:ಪ್ರಕರಣದಲ್ಲಿ ಮೊದಲು ಶರಣಾಗಿದ್ದ ನಾಲ್ವರು ಆರೋಪಿಗಳು ಹಾಗೂ ದರ್ಶನ್ ಅವರನ್ನು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ. ಹತ್ಯೆಯ ಬಳಿಕ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲು ದರ್ಶನ್ ಮೈಸೂರಿಗೆ ತೆರಳಿದ್ದರು. ಮೊದಲೇ ಚರ್ಚಿಸಿದಂತೆ ಮೃತದೇಹ ವಿಲೇವಾರಿಯಾದ ಬಳಿಕ ಪೊಲೀಸರ ಮುಂದೆ ಶರಣಾಗಲು ಮೀನಮೇಷ ಎಣಿಸಿದ್ದ ಆರೋಪಿಗಳು, ಮೈಸೂರಿಗೆ ತೆರಳಿ ಖಾಸಗಿ ಹೋಟೆಲ್‌ನಲ್ಲಿದ್ದ ದರ್ಶನ್ ಭೇಟಿಯಾಗಿ ಚರ್ಚಿಸಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ದೊರೆತಿದೆ.

ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್-ಪವಿತ್ರಾಗೌಡ ಸೇರಿ 13 ಮಂದಿ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ - Actor Darshan Case

ABOUT THE AUTHOR

...view details