ಬೆಂಗಳೂರು: ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಪ್ರಸನ್ನ ಕುಮಾರ್ ನೇಮಕ ಸಂಬಂಧ ರಾಜ್ಯ ಒಳಾಡಳಿತ ಇಲಾಖೆ ಶನಿವಾರ ಅಧಿಸೂಚನೆ ಹೊರಡಿಸಿದೆ.
ದರ್ಶನ್ ಮತ್ತಿತರರು ಆರೋಪಿಗಳಾಗಿ ಸಂಚಲನ ಉಂಟುಮಾಡಿರುವ ಈ ಪ್ರಕರಣದಲ್ಲಿ ಪ್ರಸನ್ನ ಕುಮಾರ್ ಅವರು ವಿಚಾರಣಾ, ಸೆಷನ್ಸ್ ಮತ್ತು ಹೈಕೋರ್ಟ್‌ನಲ್ಲಿ ವಿಶೇಷ ಪ್ರಾಸಿಕ್ಯೂಟರ್ ಎಂದು ಪ್ರತಿನಿಧಿಸುವರು. ಹೈಕೋರ್ಟ್ ವಕೀಲ ಸಿ.ಸಚಿನ್ ಅವರು ಸಹಾಯಕ ಪ್ರಾಸಿಕ್ಯೂಟರ್ ಆಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಸಹವರ್ತಿಗಳನ್ನು ಜೂ.11ರಂದು ಪೊಲೀಸರು ಬಂಧಿಸಿದ್ದಾರೆ. ಪ್ರಾರಂಭಿಕ ತನಿಖೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹಣದ ವಿಚಾರವಾಗಿ ಹತ್ಯೆ ಮಾಡಿರುವುದಾಗಿ ಹೇಳಿದ್ದರು. ನಂತರ ಹೆಚ್ಚಿನ ವಿಚಾರಣೆ ನಡೆಸಿದಾಗ ಕೆಲವು ಮಾಹಿತಿಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್, ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ವಿನಯ್, ನಾಗರಾಜ್, ಲಕ್ಷ್ಮಣ್, ದೀಪಕ್, ಪ್ರದೋಷ್, ನಿಖಿಲ್ ನಾಯಕ್ ಹಾಗೂ ಅನುಕುಮಾರ್ ಎಂಬವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್-ಪವಿತ್ರಾಗೌಡ ಸೇರಿ 13 ಮಂದಿ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ - Actor Darshan Case