ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತ್ವರಿತಗತಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಮುಂದಾಗಿದ್ದಾರೆ. ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ತ್ವರಿತ ನ್ಯಾಯಾಲಯ ಆಥವಾ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ಒಪ್ಪಿಸುವ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ದಯಾನಂದ ಮಾತನಾಡಿ, "ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ತ್ವರಿತ ನ್ಯಾಯಾಲಯ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ ಸಲ್ಲಿಸಲು ಚಿಂತನೆ ನಡೆಸಲಾಗುತ್ತಿದೆ. ಪ್ರಕರಣದ ಬಹುತೇಕ ವರದಿಗಳನ್ನು ಚಾರ್ಜ್ಶೀಟ್ನಲ್ಲಿ ನಮೂದಿಸಲಾಗಿದೆ. ಸಿಎಫ್ಎಸ್ಎಲ್ನಿಂದ ಕೆಲವೇ ವರದಿಗಳು ಇನ್ನಷ್ಟೇ ಬರಬೇಕಿದ್ದು, ಬಳಿಕ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ" ಎಂದು ತಿಳಿಸಿದರು.