ಬೆಂಗಳೂರು:ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಅಳಲು ತೋಡಿಕೊಂಡರು. ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ಪೋಷಕರು, ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ, ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿದರು. ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.
ನಮ್ಮ ಸರ್ಕಾರವು ರೇಣುಕಾಸ್ವಾಮಿಯ ಸಾವಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಸರ್ಕಾರದಿಂದ ಸಾಧ್ಯವಿರುವ ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ''ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ನನ್ನನ್ನು ಭೇಟಿಯಾಗಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿ, ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.