ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಹ್ಯಾಂಡಲ್ನಲ್ಲಿ ಬರೆದುಕೊಂಡಿದ್ದಾರೆ.
ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ: ಸಿಎಂ ಟ್ವೀಟ್ - Temporary suspension of the bill
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ (@CMofKarnataka)
Published : Jul 17, 2024, 9:24 PM IST
|Updated : Jul 17, 2024, 9:31 PM IST
"ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು" ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Last Updated : Jul 17, 2024, 9:31 PM IST