ಕರ್ನಾಟಕ

karnataka

ETV Bharat / state

ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದ ಸಚಿವರ ರಾಜೀನಾಮೆ ಪಡೆಯಬೇಕು: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಆಗ್ರಹ - MLA Shivaganga Basavaraj - MLA SHIVAGANGA BASAVARAJ

''ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದ ಸಚಿವರ ರಾಜೀನಾಮೆ ಪಡೆಯಬೇಕು'' ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ಸ್ವಪಕ್ಷದ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

Lok Sabha election Davanagere MLA Shivaganga Basavaraj
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ (ETV Bharat)

By ETV Bharat Karnataka Team

Published : Jun 11, 2024, 12:02 PM IST

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ (ETV Bharat)

ದಾವಣಗೆರೆ:''ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದೇ ಇರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಶಾಸಕ ಶಿವಗಂಗಾ ಬಸವರಾಜ್ ಅವರು ಪಕ್ಷದ ನಾಯಕರಾದ ಸಂಸದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ದಾವಣಗೆರೆಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿ, ''ಲೋಕಸಭಾ ಚುನಾವಣೆಯಲ್ಲಿ ಯಾವ ಸಚಿವರು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲೀಡ್ ಕಡಿಮೆ‌ ಕೊಡಿಸಿದ್ದಾರೋ ಅಂತವರನ್ನು ಸಚಿವರನ್ನು ಸ್ಥಾನದಿಂದ ವಜಾಗೊಳಿಸಿ, ಹೊಸಬರಿಗೆ ಅವಕಾಶ ಮಾಡಿಕೊಡಿ'' ಎಂದು ಸ್ವಪಕ್ಷದ ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

''ರಾಹುಲ್ ಗಾಂಧಿಯವರು ಹಾಗೂ ಹಿರಿಯ ನಾಯಕರು ಇಂತಹ ಸಚಿವರ ವಿರುದ್ಧ ಕ್ರಮ‌ ಕೈಗೊಳ್ಳಬೇಕು. ನಮಗೆ ಪಕ್ಷ ಮುಖ್ಯವೇ ಹೊರತು, ವ್ಯಕ್ತಿ ಮುಖ್ಯವಲ್ಲ. ಆದ್ದರಿಂದ ಕ್ರಮ ಕೈಗೊಳ್ಳಬೇಕು, ಇಷ್ಟೊಂದು ಗ್ಯಾರಂಟಿ ನೀಡಿದರೂ ಕೂಡ ಹೆಚ್ಚು ಸೀಟ್ ಬಂದಿಲ್ಲ, ಯಾರು ಲೀಡ್ ಕೊಡಿಸಲು ಸಾಧ್ಯವಾಗಲಿಲ್ಲವೋ ಅಂತ ಸಚಿವರನ್ನು ತೆಗೆದುಹಾಕಿ, ಹೊಸಬರಿಗೆ ಅವಕಾಶ ಕೊಡಬೇಕು. ಹಲವು ಶಾಸಕರು, ಕಾರ್ಯಕರ್ತರು ಹಗಲು ಇರುಳು ಕೆಲಸ ಮಾಡಿ ಆಯಾ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿದ್ದಾರೆ. ಆದರೆ, ಸಚಿವರು ಅವರ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿಲ್ಲ. ಕೆಲವು ಕಡೆಗಳಲ್ಲಿ ನಮ್ಮ ಸಚಿವರು ಲೀಡ್ ಕೊಡಿಸದೇ ಇದ್ದರೂ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ'' ಎಂದು ಪ್ರಶ್ನೆಯೊಂದಕ್ಕೆ ಶಾಸಕ ಶಿವಗಂಗಾ ಬಸವರಾಜ್​ ಉತ್ತರಿಸಿದರು.

ಇದನ್ನೂ ಓದಿ:ಚೂರಿ ಇರಿತ ಪ್ರಕರಣದಲ್ಲಿ ನಿಷ್ಪಕ್ಷಪಾತ ಕ್ರಮ; ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ ಎಂದ ಸಚಿವ ಗುಂಡೂರಾವ್ - Stabbing BJP Workers

ABOUT THE AUTHOR

...view details