ಕರ್ನಾಟಕ

karnataka

ETV Bharat / state

ಮಗಳ ಮದುವೆಗೆ ಕೂಡಿಟ್ಟ 10 ತೊಲೆ ಬಂಗಾರ, ನಗದು ದೋಚಿದ ಕಳ್ಳರು: ಗೋಳಾಡಿದ ಆಟೋ ಚಾಲಕ - AUTO DRIVER HOUSE STOLEN

ಆಟೋ ಚಾಲಕರೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿ, 5.60 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.

ಆಟೋ ಚಾಲಕನ ಮನೆ ಕಳ್ಳತ, Auto driver house stolen
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ (ETV Bharat)

By ETV Bharat Karnataka Team

Published : Jan 24, 2025, 8:03 AM IST

ಗಂಗಾವತಿ (ಕೊಪ್ಪಳ):ಆಟೋ ಚಾಲಕರೊಬ್ಬರು ತನ್ನಮಗಳ ಮದುವೆಗೆಂದು ಕೂಡಿಟ್ಟಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ಹಾಡಹಗಲೇ ದೋಚಿ ಕಳ್ಳರು ಪರಾರಿಯಾಗಿರುವ ಘಟನೆಗಂಗಾವತಿ ತಾಲೂಕಿನವೆಂಕಟಗಿರಿ ಹೋಬಳಿಯ ಆರ್ಹಾಳ್ ಗ್ರಾಮದಲ್ಲಿ ನಡೆದಿದೆ. ಹಣ, ಚಿನ್ನಾಭರಣ ಕಳೆದುಕೊಂಡ ಕುಟುಂಬ ಗೋಳಾಡುತ್ತಿದೆ.

ಆಟೋ ಚಾಲಕ ವೃತ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಿರೇಶ ಅಡಿವೆಪ್ಪ ಪಟ್ಟಣಶೆಟ್ಟಿ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ವಿರೇಶ ಅವರ ಮನೆಯಲ್ಲಿದ್ದ ಹತ್ತುವರೆ ತೊಲೆ ಚಿನ್ನಾಭರಣ ಮತ್ತು 2.25 ಲಕ್ಷ ರೂಪಾಯಿ ನಗದು ಸೇರಿದಂತೆ ಒಟ್ಟು 5.60 ಲಕ್ಷ ಮೌಲ್ಯದ ನಗ-ನಾಣ್ಯ ಕದ್ದು ಪರಾರಿಯಾಗಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ:ಆಟೋ ಬಾಡಿಗೆಗಾಗಿ ವಿರೇಶ ಗಂಗಾವತಿಗೆ ಬಂದಿದ್ದರು. ಮನೆಗೆ ಬೀಗ ಹಾಕಿ ಅವರ ಪತ್ನಿ ರುದ್ರಮ್ಮ ಹಾಗೂ ಪುತ್ರಿ ಐಶ್ವರ್ಯ, ಮನೆಗೆ ಬೀಗ ಹಾಕಿ ಅದೇ ಗ್ರಾಮದ ರೈತರೊಬ್ಬರ ಹೊಲಕ್ಕೆ ಕಳೆ ತೆಗೆಯಲು ಹೋಗಿದ್ದ ವೇಳೆ ಮನೆಯಲ್ಲಿ ಕಳ್ಳತನ ನಡೆದಿದೆ.

ರುದ್ರಮ್ಮ, ಐಶ್ವರ್ಯ ಕೂಲಿ ಮುಗಿಸಿ ವಾಪಾಸ್ ಮನೆಗೆ ಬಂದಾಗ ಬೀಗ ಮುರಿದಿರುವುದು ಗಮನಿಸಿ ಒಳಗೆ ಹೋಗಿ ನೋಡಿದ್ದಾರೆ. ಬಂಗಾರ, ನಗದು ಹಣ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ 12 ರಿಂದ 4 ಗಂಟೆಯೊಳಗೆ ಕಳ್ಳರು ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಆಟೋ ಚಾಲಕನ ಅಳಲು:ಆಟೋ ಚಲಾಯಿಸಿಕೊಂಡು ಜೀವನ ನಡೆಸುತ್ತಿದ್ದ ವಿರೇಶ, ತನ್ನ ತಾತನ ಮನೆಯಿಂದ ಹಾಗೂ ಪತ್ನಿಯ ತವರು ಮನೆಯಿಂದ ನೀಡಿದ ಚಿನ್ನವನ್ನು ಜೋಪಾನ ಮಾಡಿಕೊಂಡು ಬಂದಿದ್ದರು. ಇದೇ ಚಿನ್ನದಲ್ಲಿ ಇಬ್ಬರು ಹೆಣ್ಣು ಮಕ್ಕಳ ಮದುವೆ ಕೂಡ ಮಾಡಿದ್ದರು.

ಇಬ್ಬರು ಪುತ್ರಿಯರ ಮದುವೆ ಮಾಡಿರಿವೆ. ಕಿರಿಯ ಪುತ್ರಿಯ ಮದುವೆಗೆಂದು ಚಿನ್ನ ಮತ್ತು ಹಣ ತೆಗೆದಿಟ್ಟಿದೆ. ಅದೀಗ ಕಳ್ಳರ ಪಾಲಾಗಿದೆ ಎಂದು ವಿರೇಶ ಅಳಲು ತೋಡಿಕೊಂಡಿದ್ದಾರೆ.

ಬೆರಳಚ್ಚು ತಜ್ಞರು, ಶ್ವಾನ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: 'ಆಟೋದಲ್ಲಿ ಸೈಫ್​​ ನೋವು ಅನುಭವಿಸಿದ್ದರು': ಆಸ್ಪತ್ರೆಯಲ್ಲಿ ನಟನನ್ನು ಭೇಟಿಯಾದ ಚಾಲಕ ಹೇಳಿದ್ದೇನು?

ಇದನ್ನೂ ಓದಿ:ಮಂಗಳೂರಿನ ಬ್ಯಾಂಕ್​​ನಲ್ಲಿ ಗನ್​ ತೋರಿಸಿ ₹4 ಕೋಟಿ ಲೂಟಿ: ಮತ್ತೊಂದು ದರೋಡೆಯಿಂದ ಬೆಚ್ಚಿ ಬಿದ್ದ ರಾಜ್ಯ

ಇದನ್ನೂ ಓದಿ: ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್​​​ನಲ್ಲಿ ದರೋಡೆ : ಗುಂಡಿನ ದಾಳಿಯಲ್ಲಿ ಒಬ್ಬ ಸಿಬ್ಬಂದಿ ಸಾವು, 93 ಲಕ್ಷ ದೋಚಿ ದುಷ್ಕರ್ಮಿಗಳು ಎಸ್ಕೇಪ್​​

ABOUT THE AUTHOR

...view details