ಕರ್ನಾಟಕ

karnataka

ETV Bharat / state

ಧಾರವಾಡ: ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.2 ಕೋಟಿ ರೂ. ವಶಕ್ಕೆ - Cash Seized - CASH SEIZED

ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 2 ಕೋಟಿ ರೂ.ಗೂ ಹೆಚ್ಚು ಹಣವನ್ನು ಧಾರವಾಡ ಜಿಲ್ಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.

rs-2-crore-undocumented-cash-seized-in-dharwad
ಧಾರವಾಡ: ಕಾರಿನಲ್ಲಿ ದಾಖಲೆ ಇಲ್ಲದ ಸಾಗಿಸುತ್ತಿದ್ದ 2 ಕೋಟಿ ರೂ. ವಶಕ್ಕೆ

By ETV Bharat Karnataka Team

Published : Apr 15, 2024, 10:50 PM IST

ಹುಬ್ಬಳ್ಳಿ:ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿಗೂ ಅಧಿಕ ನಗದು ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಶಿಗ್ಗಾಂವಿಯಿಂದ ಬ್ರಿಜಾ ಕಾರಿನಲ್ಲಿ ಹಣವಿದ್ದ ಬ್ಯಾಗ್​​ಗಳೊಂದಿಗೆ ಪರಾರಿಯಾಗುತ್ತಿದ್ದ ಕಾರನ್ನು ಬೆನ್ನಟ್ಟಿದ ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹಣ ತಂದವರು ತಪ್ಪಿಸಿಕೊಳ್ಳಲು ವಿಫಲ ಯತ್ನ ನಡೆಸಿದ್ದಾರೆ.

ಸದ್ಯ ಕಾರಿ‌ನಲ್ಲಿದ್ದ ಬ್ಯಾಗ್​ಗಳಲ್ಲಿ 2,02,42000 ಕೋಟಿ ಹಣ ಪತ್ತೆಯಾಗಿದೆ‌. ಈ‌ ಹಣವನ್ನು ಚುನಾವಣೆಯಲ್ಲಿ‌ ಹಂಚಲು ತರಲಾಗಿತ್ತಾ? ಅಥವಾ ಯಾವುದೋ ವ್ಯವಹಾರಕ್ಕೆ ಸಾಗಾಟ ಮಾಡಲಾಗುತ್ತಿತ್ತಾ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ಧಾರಾವಾಡ ಎಸ್​ಪಿ ಗೋಪಾಲ ಬ್ಯಾಕೋಡ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಭರಮನಿ ಸೇರಿದಂತೆ ಚುನಾವಣಾಧಿಕಾರಿಗಳು, ಆದಾಯ ತೆರಿಗೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಹಣದ ಮೂಲದ ಬಗ್ಗೆ ತನಿಖೆ ಮುಂದುವರೆದಿದೆ.

ಇದನ್ನೂ ಓದಿ:ಜಯನಗರದ ಕಾರಲ್ಲಿ ಕೋಟಿ ಹಣ ಪತ್ತೆ ಪ್ರಕರಣ: ಪೊಲೀಸರಿಂದ ಮಹತ್ವದ ಮಾಹಿತಿ ಕಲೆ - Money seize case

ABOUT THE AUTHOR

...view details