ಕರ್ನಾಟಕ

karnataka

ETV Bharat / state

ಸಿಎಂ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಮಾಡಿದ ಆರ್​ಟಿಐ ಕಾರ್ಯಕರ್ತ - RTI ACTIVIST GANGARAJU

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರಿನಲ್ಲಿ ಆರ್​ಟಿಐ ಕಾರ್ಯಕರ್ತ ಗಂಗರಾಜು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಆರ್​ಟಿಐ ಕಾರ್ಯಕರ್ತ ಗಂಗರಾಜು
ಆರ್​ಟಿಐ ಕಾರ್ಯಕರ್ತ ಗಂಗರಾಜು (ETV Bharat)

By ETV Bharat Karnataka Team

Published : Oct 19, 2024, 3:56 PM IST

ಮೈಸೂರು: "ಸಿಎಂ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅನುಮೋದಿತ 20 ಗುಂಟೆ ಜಾಗವನ್ನು ಖರೀದಿ ಮಾಡಿದ್ದಾರೆ. ಅದರಲ್ಲಿ ರಸ್ತೆ ಮತ್ತು ಪೈಪ್‌ ಲೈನ್​ಗೆ ಸೇರಿದ್ದ ಜಾಗವನ್ನು ರಿಜಿಸ್ಟರ್‌ ಮಾಡಿಕೊಂಡಿದ್ದು, ಆ ವಿಚಾರ ತಿಳಿಯುತ್ತಿದ್ದಂತೆ ರಿಜಿಸ್ಟ್ರೇಷನ್ ತಿದ್ದುಪಡಿ ಮಾಡಿಸಿದ್ದಾರೆ" ಎಂದು ಆರ್​ಟಿಐ ಕಾರ್ಯಕರ್ತ ಗಂಗರಾಜು ದಾಖಲೆ ಸಮೇತ ಆರೋಪ ಮಾಡಿದ್ದಾರೆ.

"ಇಂದು ಮೈಸೂರಿನ ಮುಡಾ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಪತ್ನಿ ಪಾರ್ವತಿ ಮುಡಾ ಅನುಮೋದಿತ 20 ಗುಂಟೆ ಜಾಗವನ್ನು 29.06.2023 ರಲ್ಲಿ ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ. ಕೆಆರ್​ಎಸ್ ರಸ್ತೆಯಲ್ಲಿರುವ ಸರ್ವೆ ನಂಬರ್‌ 454 ರಲ್ಲಿ ಗಣೇಶ್‌ ದೀಕ್ಷಿತ್‌ ಎಂಬುವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗದಲ್ಲಿ, 20 ಗುಂಟೆ ಜಾಗವನ್ನ 1 ಕೋಟಿ 85 ಲಕ್ಷ ರೂ. ಕೊಟ್ಟು ಖರೀದಿಸಿದ್ದಾರೆ. 20 ಗುಂಟೆ ಅಂದರೆ 21,771/99 ಚದರ್ ಅಡಿ​ ಜಾಗದ ಪೈಕಿ 8998 ಚದರ್​ ಅಡಿ ಜಾಗ ರಸ್ತೆ ಮತ್ತು ಪೈಪ್‌ ಲೈನ್‌ ಜಾಗವಾಗಿದ್ದು, ಅದನ್ನು ಸೇರಿಸಿ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದಾರೆ" ಎಂದು ದೂರಿದರು.

ಆರ್​ಟಿಐ ಕಾರ್ಯಕರ್ತ ಗಂಗರಾಜು (ETV Bharat)

"ಈ ಬಗ್ಗೆ ಆರ್​ಟಿಐ ಕಾರ್ಯಕರ್ತರು ಅರ್ಜಿ ಹಾಕುತ್ತಿದ್ದಂತೆ 31.08.2024 ರಲ್ಲಿ ಮುಡಾಗೆ ಸೇರಿದ ರಸ್ತೆ ಮತ್ತು ಪೈಪ್ ಲೈನ್‌ ಜಾಗವನ್ನ ಬಿಟ್ಟು ರಿಜಿಸ್ಟ್ರೇಷನ್ ತಿದ್ದುಪಡಿ ಮಾಡಿಸಿದ್ದಾರೆ" ಎಂದು ಆರೋಪಿಸಿದರು.

ಇದನ್ನೂ ಓದಿ:ಮುಡಾ ಪ್ರಕರಣ: ತಾರ್ಕಿಕ ಅಂತ್ಯದವರೆಗೆ ನನ್ನ ಹೋರಾಟ- ಸ್ನೇಹಮಯಿ ಕೃಷ್ಣ

ABOUT THE AUTHOR

...view details