ಕರ್ನಾಟಕ

karnataka

ETV Bharat / state

ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರ : ಮಾಹಿತಿ ನೀಡಿದ ಮಣಿಪಾಲ್ ಆಸ್ಪತ್ರೆ - S M KRISHNA HEALTH BULLETIN - S M KRISHNA HEALTH BULLETIN

ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ತಿಳಿಸಿದೆ.

SM Krishna
ಎಸ್ ಎಂ ಕೃಷ್ಣ (ETV Bharat)

By ETV Bharat Karnataka Team

Published : May 13, 2024, 5:51 PM IST

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ನಿಗಾದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಎಸ್ಎಂಕೆ ಆರೋಗ್ಯದ ಅಪ್​ಡೇಟ್ ಬಿಡುಗಡೆ ಮಾಡಲಾಗಿದೆ.

ಏಪ್ರಿಲ್ 21ರಂದು ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್. ಎಂ ಕೃಷ್ಣ ಅವರನ್ನು ಏಪ್ರಿಲ್ 29 ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನಿಲ್‌ ಕಾರಂತ್‌ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಸದ್ಯದ ಮಟ್ಟಿಗೆ ಕೃಷ್ಣ ಅವರ ಆರೋಗ್ಯ ಕ್ರಿಟಿಕಲ್ ಕಂಡೀಷನ್​ನಲ್ಲಿಯೇ ಇದ್ದರೂ ಆರೋಗ್ಯ ಸ್ಥಿರವಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದ 24 ಗಂಟೆಯೂ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

ಕಳೆದ ಎರಡು ದಿನಗಳಿಂದ ಕೃಷ್ಣ ಅವರ ಆರೋಗ್ಯದಲ್ಲಿ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಆದರೂ ವೈದ್ಯಕೀಯ ತಂಡ ನಿರಂತರವಾಗಿ ಚಿಕಿತ್ಸೆ ಮುಂದುವರೆಸಿದ್ದು, ಆರೋಗ್ಯ ಸುಧಾರಣೆಗೆ ಪ್ರಯತ್ನ ನಡೆಸಿದೆ. ಸದ್ಯ ವೈದ್ಯಕೀಯ ನೆರವಿನಲ್ಲಿ ಕೃಷ್ಣ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.

ಇದನ್ನೂ ಓದಿ :ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ - Former CM S M Krishna

ABOUT THE AUTHOR

...view details