ವಿಜಯಪುರ: ಅನಾರೋಗ್ಯದಿಂದ ಮೃತಪಟ್ಟ ದೇವರ 'ಗೋವು'ಗೆ ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿರುವ ಅಪರೂಪದ ಘಟನೆ ಇಂಡಿ ತಾಲೂಕಿನ ಹೊರ್ತಿಯಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಆರಾಧ್ಯ ದೈವ ರೇವಣಸಿದ್ಧೇಶ್ವರ ದೇವರಿಗಾಗಿ ಕಳೆದ 15 ವರ್ಷಗಳ ಹಿಂದೆ ಆಕಳನ್ನು ಬಿಡಲಾಗಿತ್ತು. ಯಾವಾಗಲೂ ಗುಡಿಯ ಮುಂದೆಯೇ ಇರುತ್ತಿದ್ದ ಆಕಳಿಗೆ ನಿತ್ಯ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಗೋಮಾತೆ ಎಂದು ಭಕ್ತಿಯಿಂದ ಪೂಜಿಸುತ್ತಿದ್ದರು.