ಕರ್ನಾಟಕ

karnataka

ETV Bharat / state

ಮುಂದುವರಿದ ಮಳೆ: ಬೆಳಗಾವಿಯ ಈ 4 ತಾಲೂಕುಗಳಲ್ಲಿ ನಾಳೆಯೂ ಶಾಲೆಗಳಿಗೆ ರಜೆ - holiday For schools - HOLIDAY FOR SCHOOLS

ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಾಲ್ಕು ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆ (ಬುಧವಾರ) ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯ ಈ 4 ತಾಲೂಕುಗಳಲ್ಲಿ ನಾಳೆಯೂ ಶಾಲೆಗಳಿಗೆ ರಜೆ
ಬೆಳಗಾವಿಯ ಈ 4 ತಾಲೂಕುಗಳಲ್ಲಿ ನಾಳೆಯೂ ಶಾಲೆಗಳಿಗೆ ರಜೆ (ETV Bharat)

By ETV Bharat Karnataka Team

Published : Jul 23, 2024, 10:32 PM IST

ಬೆಳಗಾವಿ: ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಾಲ್ಕು ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆ (ಬುಧವಾರ) ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲೂಕಿನ ಅಂಗನವಾಡಿ, ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಧಾರಾಕಾರ ಮಳೆ ; ಹೊಸರಿತ್ತಿಯಲ್ಲಿರುವ ರಾಘವೇಂದ್ರ ಮಠಕ್ಕೆ ಜಲದಿಗ್ಬಂಧನ - WATERLOGGED AT RAGHAVENDRA MUTT

ABOUT THE AUTHOR

...view details