ದೊಡ್ಡಬಳ್ಳಾಪುರ:ಮನೆ ಮಾಲೀಕ ಮನೆಯೊಳಗಿದ್ದಾಗಲೇ ಕಾಂಪೌಂಡ್‌ನೊಳಗೆ ಪ್ರವೇಶಿಸಿ ಸ್ಕೂಟರ್ ಕಳವು ಮಾಡಿ ಪರಾರಿಯಾಗಿದ್ದ ಮುಸುಕುಧಾರಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಬಂಧಿತ ಆರೋಪಿ. ಈತ ಕೃತ್ಯ ಎಸಗಿದ ಮನೆಯಲ್ಲಿ ಬಾಡಿಗೆದಾರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಹೊರವಲಯದ ಕುರುಬರಹಳ್ಳಿಯಲ್ಲಿ ಕಳೆದ ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.