ಹಾಸನ:ಸಿಐಡಿ ವಶದಲ್ಲಿರುವ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಹೊಳೆನರಸೀಪುರ ತಾಲೂಕಿನ ಯುವಕನೊಬ್ಬ ಮೂರು ವರ್ಷಗಳ ಹಿಂದೆ ತನ್ನ ಮೇಲೆ ಸೂರಜ್ ರೇವಣ್ಣ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರು ನೀಡಿದ್ದು, ಇದೀಗ ಪ್ರಕರಣ ದಾಖಲಾಗಿದೆ.
ಜೂನ್ 21ರಂದು ಸೂರಜ್ ರೇವಣ್ಣ ಅವರಿಗೆ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ಮೊದಲು ದೂರು ನೀಡಿದ್ದ ಸಂತ್ರಸ್ತನ ವಿರುದ್ಧ ಇದೇ ಯುವಕ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ.