ಕರ್ನಾಟಕ

karnataka

ETV Bharat / state

ಲೋಕಸಭೆ ಚುನಾವಣೆ ಎರಡನೇ ಹಂತದ 14 ಕ್ಷೇತ್ರಗಳಿಗೆ ಅಧಿಸೂಚನೆ ಪ್ರಕಟ: ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ - Second phase election - SECOND PHASE ELECTION

ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಇಂದು (ಶುಕ್ರವಾರ) ಅಧಿಸೂಚನೆ ಹೊರಡಿಸಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಎರಡನೇ ಹಂತದ 14 ಕ್ಷೇತ್ರಗಳಿಗೆ ಅಧಿಸೂಚನೆ ಪ್ರಕಟ
ಎರಡನೇ ಹಂತದ 14 ಕ್ಷೇತ್ರಗಳಿಗೆ ಅಧಿಸೂಚನೆ ಪ್ರಕಟ

By ETV Bharat Karnataka Team

Published : Apr 12, 2024, 1:55 PM IST

ಬೆಂಗಳೂರು:ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎರಡನೇ ಹಂತದ 14 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದ ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಎರಡನೇ ಹಂತಕ್ಕೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏ. 19 ರಂದು ಕಡೆಯ ದಿನವಾಗಿದ್ದು, ಏ. 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ. 22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದೆ.

ಎರಡನೇ ಹಂತದ 14 ಕ್ಷೇತ್ರಗಳಿಗೆ ಅಧಿಸೂಚನೆ ಪ್ರಕಟ

ಇದೇ ಸಂದರ್ಭದಲ್ಲಿ ಯಾದಗರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಉಪಚುನಾವಣೆ ಅಧಿಸೂಚನೆ ಸಹ ಹೊರ ಬಿದ್ದಿದೆ. ಈ ಉಪಚುನಾವಣೆಗೂ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇನ್ನೂ 2ನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ವಿಜಾಪುರ, ಕಲಬುರಗಿ, ಬೆಳಗಾವಿ, ಚಿಕ್ಕೋಡಿ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ನಟ ಶಿವರಾಜ್‍ಕುಮಾರ್ ಪತ್ನಿ ಗೀತಾ ಶಿವರಾಜ್‍ಕುಮಾರ್ ಕಣದಲ್ಲಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ದಿಂಗಾಲೇಶ್ವರ ಸ್ವಾಮೀಜಿ ಕೂಡ ನಿರ್ಧರಿಸಿದ್ದಾರೆ.

ಎರಡನೇ ಹಂತದ 14 ಕ್ಷೇತ್ರಗಳಿಗೆ ಅಧಿಸೂಚನೆ ಪ್ರಕಟ

ಅದೇ ರೀತಿ ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್, ಗಾಯತ್ರಿ ಸಿದ್ದೇಶ್ವರ್, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು, ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೀದರ್ ಕೇಂದ್ರ ಸಚಿವ ಭಗವಂತ್ ಕೂಬಾ ಕಣದಲ್ಲಿರುವ ಪ್ರಮುಖರು.

ಇನ್ನು ಕಾಂಗ್ರೆಸ್‍ನಿಂದ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರ ಅಳಿಯ ರಾಧಾಕೃಷ್ಣನ್ ಕಲಬುರಗಿ ಕ್ಷೇತ್ರ, ಸಚಿವರಾದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿ, ರಾಮುಲು ವಿರುದ್ಧ ಶಾಸಕ ತುಕಾರಾಂ, ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್​ನಿಂದ ಸ್ಪರ್ಧಿಸುತ್ತಿದ್ದಾರೆ.

ಎರಡನೇ ಹಂತದ 14 ಕ್ಷೇತ್ರಗಳಿಗೆ ಅಧಿಸೂಚನೆ ಪ್ರಕಟ

ಉಪಚುನಾವಣೆಗೂ ಅಧಿಸೂಚನೆ:ಸುರಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್‌ನ ರಾಜಾವೆಂಕಟಪ್ಪ ನಾಯಕ್ ಅವರ ನಿಧನದಿಂದ ಉಪಚುನಾವಣೆ ನಡೆಯುತ್ತಿದ್ದು, ಈ ಉಪಚುನಾವಣೆಗೆ ರಾಜಾವೆಂಕಟಪ್ಪ ನಾಯಕ್ ಅವರ ಪುತ್ರ ವೇಣು ವೆಂಕಟಪ್ಪನಾಯಕ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ, ಬಿಜೆಪಿಯಿಂದ ಮಾಜಿ ಸಚಿವ ರಾಜುಗೌಡ ನರಸಿಂಹನಾಯಕ್ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಲೋಕಸಭಾ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕಗಳೇ ಅನ್ವಯವಾಗಲಿದೆ.

ABOUT THE AUTHOR

...view details