ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ: 40,864 ಉತ್ತರ ಪತ್ರಿಕೆಗಳ ಫಲಿತಾಂಶದಲ್ಲಿ ಸುಧಾರಣೆ - Second PUC Exam 2 result - SECOND PUC EXAM 2 RESULT

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, 40 ಸಾವಿರಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಫಲಿತಾಂಶದಲ್ಲಿ ಸುಧಾರಣೆಯಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ (ETV Bharat)

By ETV Bharat Karnataka Team

Published : May 21, 2024, 6:44 PM IST

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಕಡಿಮೆ ಅಂಕಗಳು ಬಂದ ಹಿನ್ನೆಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ 32,940 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟು 40,864 ಉತ್ತರ ಪತ್ರಿಕೆಗಳ ಫಲಿತಾಂಶದಲ್ಲಿ ಸುಧಾರಣೆಯಾಗಿದೆ. ಇದರಲ್ಲಿ ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹ ಪಾಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ರಲ್ಲಿ ಫಲಿತಾಂಶ ಸುಧಾರಣೆ ಬಯಸಿ 32,940 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಅದರಲ್ಲಿ ಭೌತಶಾಸ್ತ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 23,689 ವಿದ್ಯಾರ್ಥಿಗಳಲ್ಲಿ 14,065 ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದುಕೊಂಡಿದ್ದಾರೆ. ಗಣಿತಶಾಸ್ತ್ರದಲ್ಲಿ 17,100 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 8,933 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಂಡಿದ್ದಾರೆ. ರಸಾಯನಶಾಸ್ತ್ರದಲ್ಲಿ 20,226 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 7,127 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಂಡು ಫಲಿತಾಂಶ ಸುಧಾರಣೆಯಲ್ಲಿ ಸಫಲರಾಗಿದ್ದಾರೆ. ಜೀವಶಾಸ್ತ್ರದಲ್ಲಿ 8,331 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 1,718 ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವಲ್ಲಿ ಸಫಲರಾಗಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಶಾಲೆಯಲ್ಲಿ ಓದಿ ರಾಜ್ಯಕ್ಕೆ ಫಸ್ಟ್ ಬಂದ ರೈತನ ಮಗಳು: IAS ಅಧಿಕಾರಿಯಾಗುವ ಕನಸು - SSLC Topper

ಕಲಾ ವಿಭಾಗದ ಫಲಿತಾಂಶದಲ್ಲಿ ಇತಿಹಾಸ ವಿಷಯದಲ್ಲಿ 666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 392 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಂಡಿದ್ದಾರೆ. ಅರ್ಥಶಾಸ್ತ್ರದಲ್ಲಿ 1338 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 548 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಂಡಿದ್ದಾರೆ. ಸಮಾಜಶಾಸ್ತ್ರದಲ್ಲಿ 450 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 229 ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದುಕೊಂಡಿದ್ದಾರೆ. ರಾಜ್ಯಶಾಸ್ತ್ರದಲ್ಲಿ 602 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 239 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಂಡಿದ್ದಾರೆ.

ಅದರಂತೆ ವಾಣಿಜ್ಯ ವಿಭಾಗದ ಲೆಕ್ಕಶಾಸ್ತ್ರದಲ್ಲಿ 775 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 276 ವಿದ್ಯಾರ್ಥಿಗಳು ಫಲಿತಾಂಶ ಸುಧಾರಣೆಯಲ್ಲಿ ಸಫಲರಾಗಿದ್ದಾರೆ. ಸಂಖ್ಯಾಶಾಸ್ತ್ರದಲ್ಲಿ 475 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 280 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಂಡಿದ್ದಾರೆ. ವ್ಯವಹಾರ ಅಧ್ಯಯನದಲ್ಲಿ 793 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 220 ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದುಕೊಂಡಿದ್ದಾರೆ.

ಭಾಷಾ ವಿಷಯದಲ್ಲಿ ಕನ್ನಡದಲ್ಲಿ 1906 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೆ ಆಂಗ್ಲ ಭಾಷೆಯಲ್ಲಿ 8333 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, ಈ ಪೈಕಿ 455 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಂಡಿದ್ದಾರೆ. ಮರಾಠಿಯಲ್ಲಿ ಇಬ್ಬರು ಪರೀಕ್ಷೆ ಬರೆದರೂ ಯಾರೂ ಅಂಕ ಹೆಚ್ಚಿಸಿಕೊಂಡಿಲ್ಲ. ಅದರಂತೆ ಮಾಹಿತಿ ತಂತ್ರಜ್ಞಾನದಲ್ಲಿ ಒಬ್ಬರು ಪರೀಕ್ಷೆ ಬರೆದಿದ್ದವರೂ ಕೂಡ ಅಂಕ ಹೆಚ್ಚಿಸಿಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂಓದಿ:ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ: ಮತ್ತೆ ವಿದ್ಯಾರ್ಥಿನಿಯರೇ ಮೇಲುಗೈ - Second PUC Result

ABOUT THE AUTHOR

...view details