ಬೆಂಗಳೂರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶವನ್ನು ನಾಳೆ (ಮಂಗಳವಾರ) ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಮಧ್ಯಾಹ್ನ 3 ಗಂಟೆ ನಂತರ ಇಲಾಖೆಯ ವೆಬ್ ಸೈಟ್ನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದೆ.
2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಗಿತ್ತು. ಇದರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ತಿಳಿಸಿದೆ. ಪರೀಕ್ಷೆ-1 ರ ಫಲಿತಾಂಶವನ್ನು ಸುದ್ದಿಗೋಷ್ಠಿ ನಡೆಸಿ ಬಿಡುಗಡೆ ಮಾಡಿದಂತೆ ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶವನ್ನು ಸುದ್ದಿಗೋಷ್ಠಿ ನಡೆಸದೇ ನೇರವಾಗಿ ವೆಬ್ ಸೈಟ್ನಲ್ಲಿಯೇ ಪ್ರಕಟಿಸಲಿದೆ.