ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಪೂರ್ಣಗೊಳಿಸಿದೆ. ನಿಗದಿತ ವೇಳಾಪಟ್ಟಿಯಂತೆ ಜೂನ್ 24ರಿಂದ ಜುಲೈ 5ರವರೆಗೆ ಪರೀಕ್ಷೆ ನಡೆಯಲಿದೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷಾ ಪದ್ಧತಿ ಜಾರಿಯಾದ ನಂತರ ನಡೆಯುತ್ತಿರುವ ದ್ವಿತೀಯ ಪಿಯುಸಿ ಮೊದಲ ವರ್ಷದ ಮೂರನೇ ಪರೀಕ್ಷೆಗೆ ರಾಜ್ಯದಲ್ಲಿ ಒಟ್ಟು 248 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿದೆ. ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣ ದಳಗಳನ್ನು ನಿಯೋಜಿಸಲಾಗುತ್ತಿದೆ.
ಕಲಾ ವಿಭಾಗದಲ್ಲಿ 19,113 ಬಾಲಕರು, 11,698 ಬಾಲಕಿಯರು ಸೇರಿ 30,811 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8,817 ಬಾಲಕರು, 10,966 ಬಾಲಕಿಯರು ಸೇರಿ ಒಟ್ಟು 19,783 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 16,428 ಬಾಲಕರು, 8,973 ಬಾಲಕಿಯರು ಸೇರಿ ಒಟ್ಟು 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟಾರೆ, 44,358 ಬಾಲಕರು, 31,637 ಬಾಲಕಿಯರು ಸೇರಿ ಒಟ್ಟು 75,995 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -3 ಬರೆಯಲಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ 3ರ ವೇಳಾಪಟ್ಟಿ:
24-06-2024 : ಪ್ರಥಮ ಭಾಷೆ ಕನ್ನಡ
25-06-2024 : ದ್ವಿತೀಯ ಭಾಷೆ ಇಂಗ್ಲಿಷ್
26-06-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ
27-06-2024 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ