ಬೆಂಗಳೂರು: ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದ್ದಾರೆ. ಗಣೇಶೋತ್ಸವ ಆಚರಿಸಲ್ಪಡುವ ಏರಿಯಾಗಳನ್ನ ಸೂಕ್ಷ್ಮ, ಅತಿ ಸೂಕ್ಷ್ಮ ಹಾಗೂ ಸಾಮಾನ್ಯ ಎಂದು ವಿಂಗಡಿಸಲಾಗಿದೆ.
ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಏರಿಯಾಗಳಾದ ಚಾಮರಾಜಪೇಟೆ, ಜೆ.ಜೆ.ನಗರ, ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ, ಎಸ್.ಜಿ ಪಾಳ್ಯ, ವಿವೇಕನಗರ, ತಿಲಕನಗರ, ಬನಶಂಕರಿ, ಆರ್.ಟಿ.ನಗರ, ಜೆ.ಸಿ.ನಗರದಲ್ಲಿ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಗಣೇಶ ಪ್ರತಿಷ್ಠಾಪನೆ, ನಿಮಜ್ಜನ ವೇಳೆ ಸಿಸಿಟಿವಿ ಕ್ಯಾಮರಾ, ಡ್ರೋನ್ ಕ್ಯಾಮರಾಗಳ ಮೂಲಕ ಪೊಲೀಸರು ನಿಗಾ ವಹಿಸಲಿದ್ದಾರೆ. ಈಗಾಗಲೇ ಆಯಾ ಏರಿಯಾಗಳ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿರುವ ಪೊಲೀಸರು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.
ಗಣೇಶ ಹಬ್ಬದ ಶುಭಾಶಯ ಕೋರಿದ ಮಾಜಿ ಪಿಎಂ, ಕೇಂದ್ರ ಸಚಿವ ಹೆಚ್ಡಿಕೆ:ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಹಾರ್ದಿಕ ಶುಭಾಶಯವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಕೋರಿದ್ದಾರೆ.