ಕರ್ನಾಟಕ

karnataka

ETV Bharat / state

ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ - Mysuru Dasara 2024

ಈ ಬಾರಿ ದಸರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ದಸರಾ ಆನೆಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಜಂಬೂ ಸವಾರಿ ಸೇರಿದಂತೆ ನಾಡಹಬ್ಬಕ್ಕೆ ತಾಲೀಮು ನಡೆಸಲಾಗುತ್ತಿದೆ. ನಾಡಹಬ್ಬದ ಉದ್ಘಾಟನೆ ಸಮಾರಂಭಕ್ಕೆ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಆಹ್ವಾನಿಸಲು ಸರ್ಕಾರ ತೀರ್ಮಾನಿಸಿದೆ.

dasara
ಹಂ.ಪಾ.ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ, ಇತರ ಸಚಿವರು, ಶಾಸಕರು (ETV Bharat)

By ETV Bharat Karnataka Team

Published : Sep 20, 2024, 3:09 PM IST

Updated : Sep 20, 2024, 6:31 PM IST

ಮೈಸೂರು:ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಾಸಕ ಮುನಿರತ್ನ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್​​ಐಟಿಗೆ ವಹಿಸಬೇಕು ಎಂದು ಒಕ್ಕಲಿಗ ಸಚಿವರು ಹಾಗೂ ಶಾಸಕರು ಇಂದು ತಮ್ಮನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ (ETV Bharat)

ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆಪಿಎಸ್​​ಸಿಗೆ ಸೂಚಿಸಲಾಗಿದೆ. ಕಾನ್ಸ್​​​ಸ್ಟೇಬಲ್​ ​ ಹುದ್ದೆಗಳಿಗೆ ವಯೋಮಿತಿಯನ್ನು 27ರಿಂದ 33 ವರ್ಷಕ್ಕೆ ಏರಿಸಬೇಕು ಎಂಬ ಬೇಡಿಕೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದರು.

60 ಸಾವಿರ ಗಣೇಶ ಪ್ರತಿಷ್ಠಾಪನೆ:ದಾವಣಗೆರೆಯಲ್ಲಿ ಗಣೇಶ ನಿಮಜ್ಜನ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಬಾರಿ 60 ಸಾವಿರ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದೆ. ಡಿವೈಎಸ್​​ಪಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಕೋಮು ಗಲಭೆಗೆ ಬಿಜೆಪಿ ಪ್ರಚೋದನೆ:ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಇದಕ್ಕೆ ಬಿಜೆಪಿಯೇ ಕಾರಣ ಎಂದು ಮುಖ್ಯಮಂತ್ರಿಗಳು ಆರೋಪಿಸಿದರು.

ಲೋಕಾಯುಕ್ತ ತನಿಖೆ ಬಗ್ಗೆ ಪರಿಶೀಲನೆ:ಮಾಜಿ ಮುಖ್ಯಮಂತ್ರಿಗಳಾದ ಹೆಚ್​.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್​.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021ರಿಂದ ಲೋಕಾಯುಕ್ತದವರು ತನಿಖೆ ನಡೆಸದೇ ಇರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆ ಬಾಳುವಂತದ್ದಾಗಿದೆ. ಕುಮಾರಸ್ವಾಮಿ ಅವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಒ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲದಿದ್ದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿ ಪಡೆದು, ಪರಿಶೀಲನೆ ನಡೆಸಲಾಗುವುದು ಎಂದರು.

ಸರ್ಕಾರ ಯಾರ ಮೇಲೂ ಆರೋಪ ಮಾಡುವುದಿಲ್ಲ:ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸ ಮಾಡಿಲ್ಲ. ಕುಮಾರಸ್ವಾಮಿ ಅವರು ಎಂದಿಗೂ ಹಿಟ್ ಅಂಡ್ ರನ್ ಮಾಡುವವರಾಗಿದ್ದು, ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆ ಅರಿತು ಮಾತನಾಡಬೇಕು ಎಂದು ಇದೇ ವೇಳೆ ಸಿಎಂ ತಿರುಗೇಟು ನೀಡಿದರು.

ಇದನ್ನೂ ಓದಿ:ಬಿಜೆಪಿ, ಜೆಡಿಎಸ್ ಕುಮ್ಮಕ್ಕಿನಿಂದಾಗಿ ಮುನಿರತ್ನ ಅವರಿಂದ ಸಮುದಾಯದ ನಿಂದನೆ: ಡಿ.ಕೆ.ಸುರೇಶ್ - D K Suresh

Last Updated : Sep 20, 2024, 6:31 PM IST

ABOUT THE AUTHOR

...view details