ನೆಲಮಂಗಲ:ಇಲ್ಲಿಯದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಂಬೆಳಗ್ಗೆ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ವೀರಣ್ಣ(55) ಮೃತ ದುರ್ದೈವಿ.
ದಾಬಸ್ ಪೇಟೆ ಬಳಿ ಸರಣಿ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ - ROAD ACCIDENT
ದಾಬಸ್ ಪೇಟೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
Published : Dec 30, 2024, 11:14 AM IST
ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಇಂದು ಬೆಳಗ್ಗೆ ಈ ಸರಣಿ ಅಪಘಾತ ಸಂಭವಿದೆ. ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಮುಂಭಾಗದಲ್ಲಿ ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ವೀರಣ್ಣ ಸ್ಥಳದಲ್ಲೇ ಮೃತಪಟ್ಟರೆ, ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಸೇರಿದಂತೆ ಹಲವರು ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ರಸ್ತೆ ಪಕ್ಕ ನರಳಾಡುತ್ತಿದ್ದ ಪ್ರಯಾಣಿಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಪುತ್ತೂರು: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಸುಳ್ಯದ ಮೂವರು ಸಾವು - THREE KILLED IN A CAR ACCIDENT