ಕರ್ನಾಟಕ

karnataka

ETV Bharat / state

ರಾಜ್ಯದ ಬಹುತೇಕ ಕಡೆ ಇನ್ನೂ ಏಳು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - Seven more days heavy rain

ರಾಜ್ಯದಲ್ಲಿ ಮಳೆ ಕ್ಷೀಣವಾಗಿದ್ದ ಬೆನ್ನಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣ ಕಾಣಿಸಿಕೊಂಡಿತ್ತು. ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ನಿನ್ನೆ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿದಿದೆ.

Seven more days heavy rain
ಏಳು ದಿನ ಭಾರಿ ಮಳೆ (ETV Bharat)

By ETV Bharat Karnataka Team

Published : Aug 6, 2024, 12:24 PM IST

ಬೆಂಗಳೂರು:ರಾಜ್ಯದ ಬಹುತೇಕ ಕಡೆ ಇಂದಿನಿಂದ ಏಳು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೇ ಮಳೆ ಆರಂಭವಾಗಿದ್ದು, ಮಂಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರದಲ್ಲಿ ಮಳೆಯಾಗಲಿದೆ.

ಆಗುಂಬೆ, ಸಿದ್ದಾಪುರ, ಕುಮಟಾ, ಕೋಟ, ಗೋಕರ್ಣ, ಲಿಂಗನಮಕ್ಕಿ, ಕಾರವಾರ, ಕಾರ್ಕಳ, ಶೃಂಗೇರಿ, ಕೊಪ್ಪ, ಬಾಳೆಹೊನ್ನೂರು, ಯಲ್ಲಾಪುರ, ಬೆಳ್ತಂಗಡಿ, ಉಪ್ಪಿನಂಗಡಿ, ಸಿದ್ದಾಪುರ, ಕುಂದಾಪುರ, ಹೊನ್ನಾವರದಲ್ಲಿ ಮಳೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ.

ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ನಿನ್ನೆ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿದಿದೆ. ರಾಜ್ಯದಲ್ಲಿ ಮಳೆ ಕ್ಷೀಣವಾಗಿದ್ದ ಬೆನ್ನಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ ನಂತರ ಮೋಡ ಕವಿದ ವಾತಾವರಣವಿತ್ತು. ಸಂಜೆ 5 ಗಂಟೆ ನಂತರ ಆರಂಭವಾದ ಜೋರು ಮಳೆ ಮಧ್ಯರಾತ್ರಿವರೆಗೂ ಬಿದ್ದಿದೆ. ಮುಂದಿನ 2 ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ನಗರದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಜೂನ್ 1 ರಿಂದ ಆಗಸ್ಟ್ 5 ರವರೆಗೆ 185 ಮಿಮೀ ಮಳೆಯಾಗಬೇಕಿತ್ತು. ಈಗ 245 ಮಿಮೀ ಬಿದ್ದಿದ್ದು, ವಾಡಿಕೆಗಿಂತ ಶೇ. 32 ಅಧಿಕವಾಗಿದೆ. ಜುಲೈನಲ್ಲಿ 94 ಮಿಮೀ ಮಳೆಯಾಗಬೇಕಿತ್ತು. ಆದರೆ, 78 ಮಿಮೀ ಮಳೆ ಬಿದ್ದಿದ್ದು, ವಾಡಿಕೆಗಿಂತ ಶೇ.17 ಕಡಿಮೆ ಇದೆ. ಆಗಸ್ಟ್​ನಲ್ಲಿ ಐದು ದಿನಗಳಲ್ಲಿ ಒಟ್ಟು 20 ಮಿಮೀ ಮಳೆಯಾಗಿದೆ.

ಇದನ್ನೂ ಓದಿ:ರಾಜಧಾನಿಯಲ್ಲಿ ವರುಣಾರ್ಭಟ; ಮುಖ್ಯರಸ್ತೆ ಜಲಾವೃತ, ವಾಹನ ಸಂಚಾರ ಅಸ್ತವ್ಯಸ್ತ - Bengaluru Rain

ABOUT THE AUTHOR

...view details