ಕರ್ನಾಟಕ

karnataka

ETV Bharat / state

ಲೈಂಗಿಕ ದೌರ್ಜನ್ಯದ ಎರಡನೇ ಪ್ರಕರಣ: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ - PRAJWAL REVANNA CASE

ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶಿಸಿದೆ.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ (ETV Bharat)

By ETV Bharat Karnataka Team

Published : Jun 18, 2024, 8:24 PM IST

ಬೆಂಗಳೂರು:ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದ ಎರಡನೇ ಎಫ್​ಐಆರ್ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಎಸ್​ಐಟಿ ಕಸ್ಟಡಿ ಮಂಗಳವಾರ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಕೋರ್ಟ್​​ಗೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ಮೂರನೇ ಎಫ್ಐಆರ್ ಸಂಬಂಧ ವಿಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವುದಾಗಿ ಎಸ್ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಸಿಐಡಿಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ವಿಚಾರಣೆ ಅಗತ್ಯ ಇರುವುದರಿಂದ ಜೂನ್ 12ರಂದು ಬಾಡಿ ವಾರೆಂಟ್ ಆಧಾರದಲ್ಲಿ ಎಸ್ಐಟಿ ವಶಕ್ಕೆ ಪಡೆದಿತ್ತು. ಪ್ರಜ್ವಲ್ ರೇವಣ್ಣ ಅವರನ್ನು ಎರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿತ್ತು. ಪ್ರಜ್ವಲ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ಮೊದಲನೇ ಎಫ್ಐಆರ್ ಆರೋಪ‌ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಿ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಅವರ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಜೂನ್ 10 ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಜ್ವಲ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು.

ಇದನ್ನೂ ಓದಿ: ಭವಾನಿ ರೇವಣ್ಣಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ - RELIEF FOR BHAVANI REVANNA

ABOUT THE AUTHOR

...view details