ಕರ್ನಾಟಕ

karnataka

ETV Bharat / state

ಸರ್ಕಾರಿ‌ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೈಲು ಶಿಕ್ಷೆ

ಅಪರಾಧಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ, 40 ಸಾವಿರ ದಂಡ ಹಾಗೂ ದಂಡದ ಹಣದಲ್ಲಿ 36 ಸಾವಿರ ರೂ.ಗಳನ್ನು ನೊಂದ ಮಹಿಳೆಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

Second JMFC Court of Shivamogga
ಎರಡನೇ ಜೆಎಂಎಫ್​ಸಿ ನ್ಯಾಯಾಲಯ, ಶಿವಮೊಗ್ಗ (ETV Bharat)

By ETV Bharat Karnataka Team

Published : Nov 13, 2024, 7:18 AM IST

ಶಿವಮೊಗ್ಗ: 27 ವರ್ಷದ ಮಹಿಳೆಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲೆಯ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.

ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ಮಹಿಳೆಗೆ ವ್ಯಕ್ತಿಯೋರ್ವ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ ಆಕೆಯ ಫೋಟೊಗಳನ್ನು ಇಟ್ಟುಕೊಂಡು, ಒಂದು ವೇಳೆ ದೂರು ನೀಡಿದರೆ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದ. ಈ ಕುರಿತು ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.

ಈ ದೂರಿನನ್ವಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ, 417, 406,420,506 ರೀತ್ಯಾ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಚಂದ್ರಪ್ಪ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಎರಡನೇ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿಯ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಶಾರದಾ ಕೊಪ್ಪದ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಸರ್ಕಾರಿ ವಕೀಲ ಕಿರಣ್ ಕುಮಾರ್ ಮಾದ ಮಂಡಿಸಿದರು.

ಇದನ್ನೂ ಓದಿ:ಸಾಮಾಜಿಕ ಜಾಲತಾಣ ಬಳಕೆದಾರರೇ ಹುಷಾರ್​;​ ಬಿಎನ್​ಎಸ್​ ಕಾಯ್ದೆಯಡಿ ಆಗ್ಬಹುದು ಜೀವಾವಧಿ ಶಿಕ್ಷೆ!

ABOUT THE AUTHOR

...view details