ಕರ್ನಾಟಕ

karnataka

ETV Bharat / state

ಬಳ್ಳಾರಿ: ಬಿಮ್ಸ್ ಆಸ್ಪತ್ರೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ಅಧಿಕಾರಿ ವಿರುದ್ಧ FIR - SEXUAL HARASSMENT CASE

ಬಿಮ್ಸ್​ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಎಫ್​ಐಆರ್​ ದಾಖಲಾಗಿದೆ.

ಮಹಿಳಾ ಪೊಲೀಸ್​ ಠಾಣೆ
ಮಹಿಳಾ ಪೊಲೀಸ್​ ಠಾಣೆ (ETV Bharat)

By ETV Bharat Karnataka Team

Published : Jan 3, 2025, 3:26 PM IST

ಬಳ್ಳಾರಿ: ಬಿಮ್ಸ್​ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮಹಿಳಾ ಕಂಪ್ಯೂಟರ್ ಆಪರೇಟರ್​​ಗೆ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ವಿ.ಕೆ.ವೆಂಕಟೇಶ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬ್ಲ್ಯಾಕ್‍ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ವೆಂಕಟೇಶ್ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ದೂರಿನಲ್ಲಿ ಏನಿದೆ?: ಅಧೀಕ್ಷಕ ವಿ.ಕೆ.ವೆಂಕಟೇಶ್ ಕಳೆದ ವರ್ಷ ನ.​25 ರಂದು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿ, ತನ್ನೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ನಿಮ್ಮ ಕುಟುಂಬದ ಮರ್ಯಾದೆ ಹರಾಜು ಹಾಕುತ್ತೇನೆ ಎಂದು ಹೆದರಿಸಿದ್ದಾರೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಶೋಭಾರಾಣಿ (ETV Bharat)

ನಂತರ, ಸಂತ್ರಸ್ತೆಯನ್ನು ಬಲವಂತವಾಗಿ ಕಾರ್​ನಲ್ಲಿ ಕೂರಿಸಿಕೊಂಡು ಬೆಳಗಲ್​ ರಸ್ತೆ ಬಳಿಯ ಆಕಾಶವಾಣಿ ಕೇಂದ್ರದ ಹತ್ತಿರ ಇರುವ ಲೇಔಟ್​ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದೇ ರೀತಿಯಾಗಿ ಸಂತ್ರಸ್ತೆ ಮೇಲೆ ಪದೇ ಪದೆ ಅಧೀಕ್ಷಕ ವಿ.ಕೆ. ವೆಂಕಟೇಶ್​ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಅಲ್ಲದೇ, “ನಿನ್ನ ಪತಿಯ ನಡವಳಿಕೆ ಸರಿ ಇಲ್ಲ, ಅವನನ್ನು ಏಕೆ ಮದುವೆಯಾದೆ? ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ನಿನ್ನ ಪತಿ ಮತ್ತು ಕುಟುಂಬದವರಿಗೆ ಕಳುಹಿಸುತ್ತೇನೆ. ನಿನ್ನನ್ನು ಬೀದಿಯಲ್ಲಿ ನಿಲ್ಲಿಸುತ್ತೇನೆ. ನಿನ್ನ ತಂಗಿ ಮತ್ತು ತಾಯಿಯನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಜೈಲಿಗೆ ಕಳುಹಿಸುತ್ತೇನೆ” ಎಂದು ಅಧೀಕ್ಷಕ ವಿ.ಕೆ. ವೆಂಕಟೇಶ್​ ಸಂತ್ರಸ್ತೆಗೆ ಬ್ಲಾಕ್​ಮೇಲ್​ ಮಾಡಿದ್ದಾರೆ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಶೋಭಾರಾಣಿ ಮಾತನಾಡಿ, "ಬಿಮ್ಸ್​ನ ಮಹಿಳಾ ಸಿಬ್ಬಂದಿಯ ಮೇಲೆ ಸಹಾಯಕ ಆಡಳಿತಾಧಿಕಾರಿ ವಿ.ಕೆ.ವೆಂಕಟೇಶ್​ ಎಂಬುವವರು ಕಳೆದ ಎರಡೂವರೆ ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಮೇರೆಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರವಾಸಿಗರಿಂದ ಹಣ ವಸೂಲಿ: ಕೆಆರ್‌ಎಸ್‌ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ABOUT THE AUTHOR

...view details