ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುವಕನಿಗೆ 20 ವರ್ಷ ಜೈಲು ಶಿಕ್ಷೆ - ಫಾಸ್ಟ್ ಟ್ರ್ಯಾಕ್ ಪೋಕ್ಸೊ ನ್ಯಾಯಾಲಯ

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿಗೆ 20 ವರ್ಷ ಜೈಲು ಹಾಗೂ 2.20 ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್‌ ಆದೇಶಿಸಿದೆ.

Additional District and Sessions Court, Shimoga
ಶಿವಮೊಗ್ಗದ ಅಡಿಷನಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

By ETV Bharat Karnataka Team

Published : Jan 25, 2024, 1:27 PM IST

ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎರಡನೇ ಫಾಸ್ಟ್ ಟ್ರ್ಯಾಕ್ ಪೋಕ್ಸೊ ನ್ಯಾಯಾಲಯ) ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

2021ರಲ್ಲಿ ದಾವಣಗೆರೆಯ ಯುವಕ ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಭದ್ರಾವತಿಯ ನೊಂದ ಬಾಲಕಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಅಂದಿನ ಪಿಐ ಚೈತನ್ಯ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್ ಜೆ.ಎಸ್. ಅಪರಾಧಿಗೆ ದಂಡ ಸಮೇತ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ದಂಡ ಕಟ್ಟಲು ವಿಫಲನಾದರೆ 6 ತಿಂಗಳ ಹೆಚ್ಚುವರಿ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ಹಾಗೂ ಶ್ರೀಧರ್ ವಾದ ಮಂಡಿಸಿದ್ದರು.

ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ನಿರ್ದೇಶಕರನ್ನು ಹುದ್ದೆಯಿಂದ ವಜಾಗೊಳಿಸಿದ ಕಲ್ಕತ್ತಾದ ಐಐಎಂ

ABOUT THE AUTHOR

...view details