ದಾವಣಗೆರೆ:ಇದೇಮೊದಲ ಬಾರಿ ಸಂಸದೆಯಾಗಿ ಆಯ್ಕೆಯಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸೋಮವಾರ ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮ ಸೊಸೆ ಪ್ರಮಾಣ ವಚನ ಸ್ವೀಕರಿಸುವುದನ್ನು ಟಿವಿಯಲ್ಲಿ ವೀಕ್ಷಿಸಿ ಶಾಮನೂರು ಶಿವಶಂಕರಪ್ಪ ಖುಷಿಪಟ್ಟರು.
ಸೊಸೆ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕ್ಷಣ ಕಣ್ತುಂಬಿಕೊಂಡ ಶಾಮನೂರು ಶಿವಶಂಕರಪ್ಪ - Prabha Mallikarjun taking oath - PRABHA MALLIKARJUN TAKING OATH
ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಂದು ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಕಂಡು ಶಾಮನೂರು ಶಿವಶಂಕರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ (ETV Bharat)
Published : Jun 24, 2024, 11:02 PM IST
ನೂತನವಾಗಿ ಆಯ್ಕೆಯಾದ ಎಲ್ಲಾ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರತಿಯೊಬ್ಬ ಸಂಸದರೂ ಪ್ರಮಾಣ ವಚನ ಸ್ವೀಕರಿಸಿದರು.