ಕರ್ನಾಟಕ

karnataka

ETV Bharat / state

94ನೇ ವಸಂತಕ್ಕೆ ಕಾಲಿಟ್ಟ ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ - Shamanur Shivashankarappa Birthday

ರಾಜ್ಯದ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಇಂದು 94ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ (ETV Bharat)

By ETV Bharat Karnataka Team

Published : Jun 16, 2024, 9:51 AM IST

ದಾವಣಗೆರೆ: ರಾಜ್ಯದ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ದಾವಣಗೆರೆಯ ಪ್ರಭಾವಿ ರಾಜಕಾರಣಿಯಾಗಿರುವ ಇವರು ದಾವಣಗೆರೆ ದಕ್ಷಿಣ ಕ್ಷೇತ್ರದ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದವರು. 1930 ಜೂನ್ 16ರಂದು ಜನಿಸಿರುವ ಶಾಮನೂರು, 1972ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಮೊಟ್ಟಮೊದಲ ಬಾರಿಗೆ ದಾವಣಗೆರೆ ನಗರಸಭೆ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ್ದರು. 1998–1999ರವರೆಗೆ ಲೋಕಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

ಬಳಿಕ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ. 2008ರಲ್ಲಿ ವಿಧಾನಸಭೆಗೆ ಮೊದಲ ಬಾರಿ ಆಯ್ಕೆಯಾಗಿದ್ದ ಶಿವಶಂಕರಪ್ಪ 2013, 2018, 2023 ಹೀಗೆ ಸತತವಾಗಿ ಆಯ್ಕೆಯಾಗಿದ್ದಾರೆ. ‌2013ರ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತೋಟಗಾರಿಕೆ ಸಚಿವರಾಗಿ ಕೆಲಸ ಮಾಡಿದ್ದಾರೆ.

ಕಳೆದ ಮೂರು ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿದ್ದಾರೆ. ಶಿಕ್ಷಣವಾದಿಯಾಗಿರುವ ಜೊತೆಗೆ ಕೈಗಾರಿಕೋದ್ಯಮಿಯಾಗಿರುವ ಶಿವಶಂಕರಪ್ಪ, ಸಕ್ಕರೆ ಮತ್ತು ಡಿಸ್ಟಿಲರೀಸ್‍ನ ಉದ್ಯಮವನ್ನೂ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಇಂದಿರಾ ಗಾಂಧಿ 'ಭಾರತ ಮಾತೆ' ಎಂದ ಕೇಂದ್ರ ಸಚಿವ ಸುರೇಶ್ ಗೋಪಿ - Suresh Gopi On Indira Gandhi

ABOUT THE AUTHOR

...view details